ಟಿಕೆಟ್ ಇದ್ದೂ ಪ್ರವೇಶ ನಿರಾಕರಿಸಿದ ಏರ್‌ಇಂಡಿಯಾಕ್ಕೆ 10 ಲಕ್ಷ ದಂಡ

ನವದೆಹಲಿ: ಟಿಕೆಟ್ ಇದ್ದರೂ ಪ್ರಯಾಣಿಕರಿಗೆ ಬೋರ್ಡಿಂಗ್ ನಿರಾಕರಿಸಿದ್ದಕ್ಕಾಗಿ ಹಾಗೂ ಮಾರ್ಗಸೂಚಿ ಉಲ್ಲಂಘಿಸಿ ಪರಿಹಾರ ಕೊಡಲು ನಿರಾಕರಿಸಿದ್ದಕ್ಕಾಗಿ ನಾಗರಿಕ ವಿಮಾನಯಾನ ನಿರ್ದೇಶನಾಲಯವು (DGCA) ಏರ್ ಇಂಡಿಯಾ ವಿಮಾನಯಾನ ಸಂಸ್ಥೆಗೆ 10 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಬೆಂಗಳೂರು, ಹೈದರಾಬಾದ್ ಹಾಗೂ ದೆಹಲಿಯಲ್ಲಿ ನಮ್ಮ ಕಣ್ಗಾವಲು ಘಟಕವು ಪರಿಶೀಲನೆ ನಡೆಸಿದಾಗ, ಏರ್ ಇಂಡಿಯಾ ಸಂಸ್ಥೆ ಮಾರ್ಗಸೂಚಿ (ಪ್ರಯಾಣಿಕರಿಗೆ ಪರಿಹಾರ ನೀಡುವುದಕ್ಕೆ ಸಂಬಂಧಿಸಿದ್ದು) ಉಲ್ಲಂಘಿಸಿರುವುದು ಕಂಡುಬಂದಿದೆ. ಈ ಕುರಿತು ಶೋಕಾಸ್ ನೋಟಿಸ್ ನೀಡಿ ವಿಚಾರಣೆಯನ್ನೂ ನಡೆಸಲಾಗಿತ್ತು ಎಂದು ಡಿಜಿಸಿಎ ತಿಳಿಸಿದೆ. ಇದನ್ನೂ ಓದಿ: ಅಂದು ಜಯಾ ಜೈಲಿಗೆ, ಇಂದು ಸಂಕಷ್ಟದಲ್ಲಿ ಸೋನಿಯಾ, ರಾಹುಲ್‌ – ಇದು ಸ್ವಾಮಿ ದೂರಿನ ಕರಾಮತ್ತು

ಈ ವಿಚಾರಕ್ಕೆ ಸಂಬಂಧಿಸಿ ಏರ್ ಇಂಡಿಯಾವು ನೀತಿ ಹೊಂದಿಲ್ಲದಿರಬಹುದು. ಹೀಗಾಗಿ ಪರಿಹಾರ ನೀಡದೇ ಇದ್ದಿರಬಹುದು. ಆದರೆ ಇದು ಗಂಭೀರ ಮತ್ತು ಸ್ವೀಕಾರಾರ್ಹವಲ್ಲದ ಪ್ರಕರಣ. ನಿರ್ದಿಷ್ಟ ಪ್ರಕರಣಗಳಲ್ಲಿ ಶೋಕಾಸ್ ನೋಟಿಸ್ ನೀಡಿ ವಿವರಣೆ ಕೋರಲಾಗಿದೆ. ಏರ್ ಇಂಡಿಯಾ ನೀಡಿರುವ ವಿವರಣೆಯನ್ನು ಪರಿಶೀಲಿಸಿದ ಬಳಿಕ 10 ಲಕ್ಷ ರೂ. ದಂಡ ವಿಧಿಸಲಾಗಿದೆ. ಅಲ್ಲದೆ, ಮುಂದಿನ ಕ್ರಮ ಕೈಗೊಳ್ಳುವುದಕ್ಕೂ ಮುನ್ನವೇ ಪ್ರಯಾಣಿಕರಿಗೆ ಪರಿಹಾರ ನೀಡುವಂತೆ ಡಿಜಿಸಿಎ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಯೋಗಿ ಆದಿತ್ಯನಾಥ್‌ ʼಸೂಪರ್‌ ಚೀಫ್‌ ಜಸ್ಟಿಸ್‌ʼನಂತೆ ವರ್ತಿಸುತ್ತಿದ್ದಾರೆ: ಓವೈಸಿ ಟೀಕೆ

ಸಾಂದರ್ಭಿಕ ಚಿತ್ರ

ಮೇ 7 ರಂದು ರಾಂಚಿ ವಿಮಾನ ನಿಲ್ದಾಣದಲ್ಲಿ ಅಂಗವಿಕಲ ಬಾಲಕನಿಗೆ ವಿಮಾನದಲ್ಲಿ ಪ್ರಯಾಣಿಸಲು ಅವಕಾಶ ನಿರಾಕರಿಸಿದ ಇಂಡಿಗೊ ಏರ್‌ಲೈನ್ಸ್ಗೆ ಡಿಜಿಸಿಎ 5 ಲಕ್ಷ ರೂ. ದಂಡ ವಿಧಿಸಿತ್ತು. ಈ ಘಟನೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಇದಾದ ಕೆಲ ದಿನಗಳ ನಂತರ ಏರ್‌ಇಂಡಿಯಾಗೆ 10 ಲಕ್ಷ ರೂ. ದಂಡ ವಿಧಿಸಿದೆ.

Comments

Leave a Reply

Your email address will not be published. Required fields are marked *