ಉಕ್ರೇನ್‍ನಲ್ಲಿರುವ ಭಾರತೀಯರಿಗೆ ನೆರವಾಗಲು ಮುಂದಾದ ಏರ್ ಇಂಡಿಯಾ ವಿಮಾನ

ನವದೆಹಲಿ: ರಷ್ಯಾ-ಉಕ್ರೇನ್ ನಡುವೆ ಯುದ್ಧದ ಕಾರ್ಮೋಡ ಆವರಿಸುತ್ತಿದ್ದಂತೆ, ಉಕ್ರೇನ್‍ನಲ್ಲಿರುವ ಭಾರತೀಯರು ಭಾರತಕ್ಕೆ ಬರಲು ಏರ್ ಇಂಡಿಯಾದ ಮೂರು ವಿಮಾನಗಳು ನೆರವಾಗಲು ಮುಂದಾಗಿದೆ.

ಉಕ್ರೇನ್‍ನಲ್ಲಿರುವ ಭಾರತೀಯರು ದೇಶಕ್ಕೆ ಮರಳುವಂತೆ ವಿದೇಶಾಂಗ ಇಲಾಖೆ ಸೂಚನೆ ನೀಡಿದ್ದು, ವಿದ್ಯಾರ್ಥಿಗಳು ಆದ್ಯತೆ ಮೇರೆಗೆ ದೇಶ ತೊರೆಯುವಂತೆ ಉಕ್ರೇನ್‍ನ ರಾಜಧಾನಿ ಕೀವ್‍ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಗೆ ಕೆಲ ದಿನಗಳ ಹಿಂದೆ ಮಾಹಿತಿ ರವಾನಿಸತ್ತು. ಈ ಬೆನ್ನಲ್ಲೇ ಏರ್ ಇಂಡಿಯಾ ಮೂರು ವಿಮಾನಗಳ ಹಾರಾಟಕ್ಕೆ ನಿರ್ಧರಿಸಿದ್ದು ಇದೀಗ ಅಧಿಕೃತ ವೆಬ್‍ಸೈಟ್‍ನಲ್ಲಿ ಬುಕ್ಕಿಂಗ್ ಕೂಡ ಆರಂಭಗೊಂಡಿದೆ. ಇದನ್ನೂ ಓದಿ: ಉಕ್ರೇನ್‌ನಲ್ಲಿರುವ ಭಾರತೀಯರು ಭಾರತಕ್ಕೆ ಬನ್ನಿ – ವಿದೇಶಾಂಗ ಇಲಾಖೆ

ಉಕ್ರೇನ್‍ನ ಬೋರಿಸ್ಪಿಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಏರ್ ಇಂಡಿಯಾದ ಮೂರು ವಿಮಾನಗಳು ಟೇಕ್ ಆಫ್ ಆಗಲಿದ್ದು, ಏರ್ ಇಂಡಿಯಾ ಬುಕಿಂಗ್ ಕಚೇರಿಗಳು, ವೆಬ್‍ಸೈಟ್, ಕಾಲ್ ಸೆಂಟರ್ ಮತ್ತು ಅಧಿಕೃತ ಟ್ರಾವೆಲ್ ಏಜೆಂಟ್‍ಗಳ ಮೂಲಕ ಬುಕಿಂಗ್ ಮಾಡಬಹುದು ಎಂದು ಏರ್ ಇಂಡಿಯಾ ಶುಕ್ರವಾರ ಟ್ವಿಟ್ಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ. ಇದನ್ನೂ ಓದಿ: ಏರ್ ಇಂಡಿಯಾ ವಿಶ್ವದಲ್ಲೇ ಅತ್ಯುತ್ತಮವಾಗಿಸುವುದು ನಮ್ಮ ಗುರಿ: ಎನ್ ಚಂದ್ರಶೇಖರನ್

ಇತ್ತ ರಷ್ಯಾ ಉಕ್ರೇನ್ ಗಡಿ ವಿವಾದ ತಾರಕಕ್ಕೇರಿದ್ದು ಎರಡು ಕಡೆಯ ಸೇನೆಗಳು ಜಮಾವಣೆಗೊಂಡಿವೆ. ರಷ್ಯಾ ಹೆಚ್ಚು ಸೈನಿಕರನ್ನು ನಿಯೋಜನೆ ಮಾಡಿದ್ದು ಯುದ್ಧಕ್ಕೆ ಸನ್ನದ್ಧವಾಗಿದೆ ಎಂದು ಉಕ್ರೇನ್ ಆರೋಪಿಸಿದೆ. ಆದರೆ ಈ ಆರೋಪವನ್ನು ರಷ್ಯಾ ನಿರಾಕರಿಸಿದೆ. ಈ ನಡುವೆ ರಷ್ಯಾ-ಉಕ್ರೇನ್ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಭಾರತವೂ ಸೇರಿದಂತೆ ಇತರ ರಾಷ್ಟ್ರಗಳು ಮುಂದಾಬೇಕು ಎಂದು ಅಮೆರಿಕಾ ಅಭಿಪ್ರಾಯಪಟ್ಟಿದೆ.

Comments

Leave a Reply

Your email address will not be published. Required fields are marked *