ಏರ್‌ಸೆಲ್‌ ಮ್ಯಾಕ್ಸಿಸ್‌ ಪ್ರಕರಣ- ಮಾಜಿ ಸಚಿವ ಪಿ.ಚಿದಂಬರಂ, ಪುತ್ರನಿಗೆ ಸಮನ್ಸ್‌

ನವದೆಹಲಿ: ಏರ್‌ಸೆಲ್‌ ಮ್ಯಾಕ್ಸಿಸ್‌ ಪ್ರಕರಣದಲ್ಲಿ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಮತ್ತು ಪುತ್ರ ಕಾರ್ತಿ ಚಿದಂಬರಂ ಸೇರಿದಂತೆ ಹಲವರಿಗೆ ದೆಹಲಿ ನ್ಯಾಯಾಲಯ ಸಮನ್ಸ್‌ ಜಾರಿ ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ದೋಷಾರೋಪಪಟ್ಟಿಯನ್ನು ಪರಿಶೀಲಿಸಿದ ದೆಹಲಿ ಕೋರ್ಟ್‌, ಡಿ.20ರಂದು ವಿಚಾರಣೆಗೆ ಹಾಜರಾಗುವಂತೆ ಆರೋಪಿಗಳಿಗೆ ಸಮನ್ಸ್‌ ಜಾರಿ ಮಾಡಿದೆ. ಇದನ್ನೂ ಓದಿ: ನಿರೂಪಕರೂ ಚೆಂಜ್- ಬಿಗ್‍ಬಾಸ್‍ಗೆ ರಮ್ಯಾ ಕೃಷ್ಣಾ ಬಾಸ್

ಪ್ರಕರಣದ ವಿಚಾರಣೆಯನ್ನು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಂ.ಕೆ.ನಾಗಪಾಲ್‌ ನಡೆಸಿದರು. ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ದಾಖಲಿಸಿರುವ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಚಿದಂಬರಂ ಮತ್ತು ಇತರ ಆರೋಪಿಗಳ ವಿರುದ್ಧ ಸಮರ್ಪಕ ಸಾಕ್ಷಿಗಳು ಲಭ್ಯವಿವೆ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.

2006ರಲ್ಲಿ ಪ್ರಕರಣ ನಡೆದಿದ್ದು, ಆಗ ಚಿದಂಬರಂ ಅವರು ಕೇಂದ್ರದ ಹಣಕಾಸು ಸಚಿವರಾಗಿದ್ದರು. 3,500 ಕೋಟಿ ಮೊತ್ತದ ಹಗರಣ ಇದಾಗಿದೆ. ಪ್ರಕರಣದಲ್ಲಿ ಚಿದಂಬರಂ ಅವರನ್ನು ಮೊದಲ ಆರೋಪಿ ಎಂದು ಹೆಸರಿಸಲಾಗಿದೆ. ಇದನ್ನೂ ಓದಿ: ಕೊರೊನಾ ರೂಪಾಂತರ ತಳಿ ಅಪಾಯಕಾರಿ: ರಾಹುಲ್ ಗಾಂಧಿ

ಚಿದಂಬರಂ ಅವರು ಹಣಕಾಸು ಸಚಿವರಾಗಿದ್ದಾಗ ವಿದೇಶಿ ಕಂಪೆನಿಗೆ “ವಿದೇಶಿ ಹೂಡಿಕೆ ಪ್ರಚಾರ ಮಂಡಳಿ”ಯ (ಎಫ್‌ಐಪಿಬಿ) ಮಂಜೂರಾತಿ ನೀಡಿದ್ದು ಹೇಗೆ ಎಂಬ ಕುರಿತು ಸಿಬಿಐ ತನಿಖೆ ನಡೆಸಿತ್ತು.

Comments

Leave a Reply

Your email address will not be published. Required fields are marked *