ನವದೆಹಲಿ: ದೇಶದಲ್ಲಿರುವ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಸ್ಥಳೀಯ ಭಾಷೆಯಲ್ಲೇ ಮಾಹಿತಿ ಪ್ರಕಟಿಸುವಂತೆ ಕೇಂದ್ರ ಸರ್ಕಾರ ಆದೇಶ ನೀಡಿದೆ.
ದೇಶದಲ್ಲಿರುವ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಇಲ್ಲಿಯವರೆಗೂ ಕೇವಲ ಹಿಂದಿ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಮಾತ್ರ ವಿಮಾನಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತಿತ್ತು. ಆದರೆ ಇನ್ನುಮುಂದಿನ ದಿನಗಳಲ್ಲಿ ಆಯಾ ಪ್ರದೇಶಗಳ ಸ್ಥಳೀಯ ಭಾಷೆಗಳಲ್ಲಿ ಮಾಹಿತಿ ಹೊರಡಿಸುವಂತೆ ಕೇಂದ್ರ ವಿಮಾನಯಾನ ಸಚಿವಾಲಯ ಆದೇಶ ನೀಡಿದೆ.

ನಾಗರೀಕ ವಿಮಾನಯಾನ ಸಚಿವ ಸುರೇಶ್ ಪ್ರಭುರವರ ಸೂಚನೆಯನ್ವಯ, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ(ಎಎಐ) ದೇಶದಲ್ಲಿರುವ ಎಲ್ಲಾ ವಿಮಾನ ನಿಲ್ದಾಣಗಳಿಗೆ ಈ ಬಗ್ಗೆ ಮಾಹಿತಿ ರವಾನಿಸಿದೆ. ಅಲ್ಲದೇ ನೂತನ ಆದೇಶವು ಸೈಲೆಂಟ್ ವಿಮಾನ ನಿಲ್ದಾಣಗಳಿಗೆ ಅನ್ವಯಿಸುವುದಿಲ್ಲವೆಂದು ತಿಳಿಸಿದೆ.
ಶೀಘ್ರವೇ ವಿಮಾನ ಪ್ರಯಾಣ ಶುಲ್ಕ ಏರಿಕೆ ಸಾಧ್ಯತೆ?
ವಿಮಾನ ಪ್ರಯಾಣ ಶುಲ್ಕವು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಸದ್ಯ ಪ್ರಯಾಣಿಕ ಸೇವಾ ಶುಲ್ಕವನ್ನು(ಪಿಎಸ್‍ಎಫ್) 130 ರೂ.ನಿಂದ 170 ರೂ.ಗೆ ಏರಿಸಲು ಕೇಂದ್ರ ಸರ್ಕಾರ ಸಜ್ಜಾಗಿದ್ದು, ಸದ್ಯದಲ್ಲಿಯೇ ಜಾರಿಗೆ ಬರಲಿದೆ. ಭದ್ರತಾ ವ್ಯವಸ್ಥೆಗಳಿಗಾಗಿ ಶುಲ್ಕ ಹೆಚ್ಚಳ ಮಾಡಲು ಸರ್ಕಾರ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply