ಬೆಂಗಳೂರು: ಸ್ಯಾಂಡಲ್‍ವುಡ್ ಕೃಷ್ಣ ಎಂದೇ ಖ್ಯಾತರಾಗಿರುವ ನಟ ಅಜಯ್ ರಾವ್ ಅವರ ಪುತ್ರಿ ಚರಿಷ್ಮಾ ಲಕ್ಷ್ಮಿಯಂತೆ ಮನೆಗೆ ಎಂಟ್ರಿ ಕೊಟ್ಟ ವಿಡಿಯೋವೊಂದು ವೈರಲ್ ಆಗುತ್ತಿದೆ.
ಅಜಯ್ ಅವರ ಪತ್ನಿ ಸ್ವಪ್ನ ರಾವ್ ಅವರು ವರಮಹಾಲಕ್ಷ್ಮಿ ಹಬ್ಬದಂದು ತಮ್ಮ ಮಗಳಿಗೆ ಸಾಂಪ್ರದಾಯಿಕ ಉಡುಪು ಹಾಕಿದ್ದಾರೆ. ಅಲ್ಲದೆ ಬ್ಯಾಕ್‍ಗ್ರೌಂಡ್‍ನಲ್ಲಿ ಭಾಗ್ಯದ ಲಕ್ಷ್ಮಿ ಬಾರಮ್ಮ ಹಾಡು ಹಾಕಿ ಚರಿಷ್ಮಾ ನಡೆದುಕೊಂಡು ಬರುತ್ತಿರುವ ವಿಡಿಯೋವನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ವರಮಹಾಲಕ್ಷ್ಮಿ ಹಬ್ಬದಲ್ಲಿ ಯಶ್ ಮಗಳ ನಗುವಿನ ಮೋಡಿ
ಸ್ವಪ್ನ ಅವರು ಚರಿಷ್ಮಾ ವಿಡಿಯೋ ಜೊತೆ ಆಕೆಯ ಫೋಟೋ ಹಾಗೂ ಫ್ಯಾಮಿಲಿ ಜೊತೆ ಕ್ಲಿಕ್ಕಿಸಿಕೊಂಡ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ. ಅಲ್ಲದೆ, “ಎಲ್ಲರಿಗೂ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು” ಎಂದು ಬರೆದುಕೊಂಡಿದ್ದಾರೆ.
ಇತ್ತೀಚೆಗೆ ಸ್ವಪ್ನ ರಾವ್ ಅವರು ತಮ್ಮ ಮಗಳು ಚರಿಷ್ಮಾಗೆ ಬಸವಣ್ಣನಂತೆ ಉಡುಪು ಹಾಕಿ ಫೋಟೋ ಕ್ಲಿಕ್ಕಿಸಿದ್ದರು. ಈ ಫೋಟೋವನ್ನು ಕೂಡ ಅವರು ಇನ್‍ಸ್ಟಾಗ್ರಾಂನಲ್ಲಿ ಹಾಕಿ, “ನಮ್ಮನೆ ಪುಟ್ಟ ಬಸವಣ್ಣ” ಎಂದು ಬರೆದುಕೊಂಡಿದ್ದರು. ಸ್ವಪ್ನ ಅವರ ಈ ಪೋಸ್ಟ್ ಗೆ ಅಭಿಮಾನಿಗಳು ಫಿದಾ ಆಗಿ ಕ್ಯೂಟ್ ಪಿಕ್ ಎಂದು ಕಮೆಂಟ್ ಮಾಡಿದ್ದರು.
ಅಜಯ್ ಅವರು ಡಿಸೆಂಬರ್ 2ರಂದು ತಮ್ಮ ಮುದ್ದಾದ ಹೆಣ್ಣು ಮಗುವಿಗೆ `ಚೆರಿಷ್ಮಾ’ ಎಂದು ನಾಮಕರಣ ಮಾಡಿದ್ದರು. ಅಜಯ್ ರಾವ್ ಅವರ ಪತ್ನಿ ಸ್ವಪ್ನ ರಾವ್ ನ. 23ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಈ ವೇಳೆ ಅಜಯ್ ರಾವ್ ಅವರು ತಮ್ಮ ಪತ್ನಿ ಸ್ವಪ್ನ ಹಾಗೂ ಪುಟ್ಟ ಕಂದಮ್ಮನ ಜೊತೆ ಸೆಲ್ಫಿ ತೆಗೆದುಕೊಂಡ ಫೋಟೋ ವೈರಲ್ ಆಗಿತ್ತು.

Leave a Reply