10 ವಿಕೆಟ್ ಕಿತ್ತು ಇತಿಹಾಸ ಬರೆದ ಪಂದ್ಯದ ಜೆರ್ಸಿಯನ್ನು ಹರಾಜಿಗಿಟ್ಟ ಅಜಾಜ್ ಪಟೇಲ್

ವೆಲ್ಲಿಂಗ್ಟನ್: ಕಳೆದ ವರ್ಷ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ಸ್ಪಿನ್ನರ್ ಅಜಾಜ್ ಪಟೇಲ್ ಎಲ್ಲಾ 10 ವಿಕೆಟ್‌ಗಳನ್ನು ಕಬಳಿಸಿ ಇತಿಹಾಸ ಬರೆದಾಗ ಧರಿಸಿದ್ದ ಜೆರ್ಸಿಯನ್ನು ಹರಾಜಿಗಿಡಲು ನಿರ್ಧರಿಸಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ 10 ವಿಕೆಟ್ ಪಡೆದ ಮೂರನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಪಟೇಲ್, ಹರಾಜಿನಿಂದ ಸಂಗ್ರಹವಾಗುವ ಹಣವನ್ನು ಮಕ್ಕಳ ಆಸ್ಪತ್ರೆಗೆ ವಿವಿಧ ರೂಪದಲ್ಲಿ ದೇಣಿಗೆ ನೀಡಲು ಮುಂದಾಗಿದ್ದಾರೆ. ಇದನ್ನೂ ಓದಿ: ಆರ್‌ಸಿಬಿ ಅಭಿಮಾನಿಗೆ ಪ್ರಪೋಸ್ ಮಾಡಿ ಮನಗೆದ್ದ ಹುಡುಗಿ – ನೆಟ್ಟಿಗರು ಫುಲ್ ಆಕ್ಟಿವ್

ಟೆಸ್ಟ್ ಕ್ರಿಕೆಟ್‌ನಲ್ಲಿ ಇನ್ನಿಂಗ್ಸ್ ಒಂದರ ಎಲ್ಲಾ 10 ವಿಕೆಟ್ ಪಡೆದು ಅಜಾಜ್ ಪಟೇಲ್ ಭಾರೀ ಮೆಚ್ಚುಗೆಗೆ ಪಾತ್ರರಾಗಿದ್ದರು. ಅಂದು ಪಟೇಲ್‌ಗೆ ಟೀಂ ಇಂಡಿಯಾದ ನಾಯಕರಾಗಿದ್ದ ವಿರಾಟ್ ಕೊಹ್ಲಿ ವಿಶೇಷವಾಗಿ ಅಭಿನಂದಿಸಿದ್ದರು. ಅಲ್ಲದೇ ಟೀಂ ಇಂಡಿಯಾದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ತಮ್ಮ ಹಸ್ತಾಕ್ಷರವಿರುವ ಭಾರತೀಯ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದ್ದರು.

ಇನ್ನಿಂಗ್ಸ್ ಒಂದರಲ್ಲಿ ಎಲ್ಲಾ 10 ವಿಕೆಟ್ ಪಡೆದ ದಿನ ನನ್ನ ಜೀವನದ ಅತ್ಯಂತ ಶ್ರೇಷ್ಠ ಕ್ರಿಕೆಟ್ ದಿನಗಳಲ್ಲಿ ಒಂದು ಎಂದಿದ್ದ ಪಟೇಲ್, ಗುರುವಾರ ಸ್ಟಾರ್‌ಶಿಪ್ ಫೌಂಡೇಶನ್ ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ಇತಿಹಾಸ ನಿರ್ಮಿಸಿದ ದಿನದಂದು ಧರಿಸಿದ್ದ ಜೆರ್ಸಿಯನ್ನು ಹರಾಜಿಗಿಟ್ಟಿರುವ ಬಗ್ಗೆ ತಿಳಿಸಿದ್ದಾರೆ. ಇದನ್ನೂ ಓದಿ: ಆರ್‌ಸಿಬಿ ಅಭಿಮಾನಿಗೆ ಪ್ರಪೋಸ್ ಮಾಡಿ ಮನಗೆದ್ದ ಹುಡುಗಿ – ನೆಟ್ಟಿಗರು ಫುಲ್ ಆಕ್ಟಿವ್

ಸ್ಟಾರ್‌ಶಿಪ್ ಫೌಂಡೇಶನ್‌ನ ಪ್ಲೇ ಥೆರಪಿಸ್ಟ್‌ಗಾಗಿ ಹಣವನ್ನು ಸಂಗ್ರಹಿಸಲು ಮುಂಬೈನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ 10 ವಿಕೆಟ್ ಕಿತ್ತು ಸಾಧನೆ ಮಾಡಿದ ನನ್ನ ಹಸ್ತಾಕ್ಷರವಿರುವ ಶರ್ಟ್ ಹರಾಜಿಗೆ ಇಡಲಾಗುತ್ತಿದೆ. ಇದರಿಂದ ಬರುವ ಹಣ ಮಕ್ಕಳು ಹಾಗೂ ಅವರ ಕುಟುಂಬಗಳಿಗೆ ಸಹಾಯವಾಗಲಿದೆ ಎಂದು ಪಟೇಲ್ ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *