ಭಾರತದಲ್ಲಿ ಮೊದಲ ಬಾರಿಗೆ ಪರಿಸರ ಸ್ನೇಹಿ ವಿಮಾನ ಪರಿಚಯಿಸಿದ ಆಕಾಶ ಏರ್‌ಲೈನ್‌

ಚಿಕ್ಕಬಳ್ಳಾಪುರ: ಕಡಿಮೆ ಇಂಧನ ಉಗುಳುವ, ದೇಶದಲ್ಲೇ ಮೊದಲ ಪರಿಸರ ಸ್ನೇಹಿ  ಬೋಯಿಂಗ್ ವಿಮಾನವನ್ನು ಆಕಾಶ ಏರ್‌ಲೈನ್‌ (Akasa Airline) ಮಂಗಳವಾರ ಪರಿಚಯಿಸಿದೆ.

ಪರಿಸರ ಸ್ನೇಹಿ ಬೋಯಿಂಗ್  737 MAX, 737-8-200 ವಿಮಾನವು ಇಂದು ಬೆಳಗ್ಗೆ 9:31ಕ್ಕೆ ಬೆಂಗಳೂರಿಗೆ ಆಗಮಿಸಿತು. ಈ ನೂತನ ವಿಮಾನ  ಅಮೆರಿಕದ ಸಿಯಾಟಲ್‌ನಿಂದ ಹೊರಟು ಇಂದು ಬೆಂಗಳೂರಿಗೆ ಬಂದು ತಲುಪಿದೆ. ಇದನ್ನೂ ಓದಿ: ಪ್ರಧಾನಿಗೆ ಲೋಕಮಾನ್ಯ ತಿಲಕ್‌ ರಾಷ್ಟ್ರೀಯ ಅವಾರ್ಡ್‌ – ಪ್ರಶಸ್ತಿ ಹಣವನ್ನು ನಮಾಮಿ ಗಂಗೆ ಯೋಜನೆಗೆ ನೀಡಿದ ಮೋದಿ

ಕಳೆದ ವರ್ಷದ ತನ್ನ ವಿಮಾನಯಾವನ್ನು ಪ್ರಾರಂಭಿಸಿದ ಆಕಾಶ ವಿಮಾನ ಸಂಸ್ಥೆಯು ಒಂದು ವರ್ಷದೊಳಗೆ 20 ವಿಮಾನವನ್ನು ವಿವಿಧ ಮಾರ್ಗಗಳಿಗೆ ತೆರೆದಿದೆ.  ವಿದೇಶಗಳಿಗೆ ವಿಮಾನ ಸೇವೆ ನೀಡಬೇಕಾದರೆ ಕನಿಷ್ಠ 20 ವಿಮಾನಗಳನ್ನು ಹೊಂದಿರಬೇಕು ಎಂಬ ನಿಯಮ ಭಾರತದಲ್ಲಿದೆ. ಈಗ 20 ವಿಮಾನಗಳನ್ನು ಹೊಂದುವ ಮೂಲಕ ಅಕಾಶ ಏರ್‌ ಇನ್ನು ಮುಂದೆ ವಿದೇಶಕ್ಕೂ ಸೇವೆ ನೀಡಲು ಅರ್ಹತೆ ಪಡೆದುಕೊಂಡಿದೆ.

ಈ ಕುರಿತು ಮಾತನಾಡಿದ ಆಕಾಶ ಏರ್‌ನ ಸಂಸ್ಥಾಪಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿನಯ್ ದುಬೆ, ಆಕಾಶ ವಿಮಾನಯಾನ ಪ್ರಾರಂಭಗೊಂಡ ಒಂದೇ ವರ್ಷದಲ್ಲಿ ತನ್ನ ವಿಮಾನಗಳ ಸಂಖ್ಯೆಯನ್ನು 20ಕ್ಕೆ ಹೆಚ್ಚಿಸಿಕೊಂಡಿರುವುದು ಹೆಮ್ಮೆ ಎನಿಸುತ್ತಿದೆ. ಅದೂ ಅಲ್ಲದೆ, ಮೊದಲ ಬಾರಿಗೆ ಬೋಯಿಂಗ್‌ 737 MAX ವಿಮಾನ ಪಡೆದ ಸಂಸ್ಥೆಯೂ ನಮ್ಮದಾಗಿದೆ. ಈ ಬೋಯಿಂಗ್‌ನ ವಿಶೇಷತೆ ಎಂದರೆ, ಇದು ಸಾಮಾನ್ಯ ಎಂಜಿನ್‌ಗಿಂತ ಶೇ.20 ರಷ್ಟು ಕಡಿಮೆ ಇಂಧನ ಉಗುಳಲಿದ್ದು, ಹೆಚ್ಚು ಪರಿಸರ ಸ್ನೇಹಿ ವಿಮಾನವಾಗಲಿದೆ. ಇದನ್ನೂ ಓದಿ: T20 ಸರಣಿಗೆ ವಿಂಡೀಸ್‌ ಬಲಿಷ್ಠ ತಂಡ ಪ್ರಕಟ – ನಿಕೋಲಸ್‌ ಪೂರನ್‌ ಈಸ್‌ ಬ್ಯಾಕ್‌

ಇಂಧನ ದಕ್ಷತೆಯನ್ನು ಸಹ ಇದು ಕಾಪಾಡಿಕೊಳ್ಳಲು ಹೆಚ್ಚು ಸಹಕಾರಿಯಾಗಿದೆ. ಈ ಬೋಯಿಂಗ್‌ನಿಂದ ಗ್ರಾಹಕರಿಗೆ ಆರಾಮದಾಯಕ ಪ್ರಯಾಣ ದೊರೆಯಲಿದೆ. ಇದಷ್ಟೇ ಅಲ್ಲದೆ ಬೇರೆ ವಿಮಾನಗಳಂತೆ ಇದು ಹೆಚ್ಚು ಶಬ್ಧ ಮಾಡುವುದಿಲ್ಲ. ಶೇ.50 ರಷ್ಟು ಕಡಿಮೆ ಶಬ್ಧ ಮಾಡಲಿದ್ದು, ಶಬ್ಧ ಮಾಲಿನ್ಯವನ್ನು ತಡೆಯಲಿದೆ ಎಂದು ವಿವರಿಸಿದರು.

ಆಗಸ್ಟ್ 2022ರಲ್ಲಿ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ಆಕಾಶ ವಿಮಾನಸಂಸ್ಥೆಯು ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ವಿಮಾನಯಾನ ಸಂಸ್ಥೆಯಾಗಿದೆ. ಇಂದು ಇದು 20 ವಿಮಾನಗಳ ಸಮೂಹವನ್ನು ಹೊಂದಿದೆ. ಇದುವರೆಗೆ 4 ಮಿಲಿಯನ್ ಪ್ರಯಾಣಿಕರನ್ನು ಸಾಗಿಸಿದೆ. 16 ಭಾರತೀಯ ನಗರಗಳನ್ನು ಸಂಪರ್ಕಿಸುವ 35 ವಿವಿಧ ಮಾರ್ಗಗಳಲ್ಲಿ ಹಾರಾಟ ನಡೆಸುತ್ತಿದೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]