ಸಂಸದ ಸ್ಥಾನಕ್ಕೆ ಅಖಿಲೇಶ್ ಯಾದವ್ ರಾಜೀನಾಮೆ

ಲಕ್ನೋ: ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಅಖಿಲೇಶ್ ಯಾದವ್ ಅವರ ಈ ನಡೆ ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತು ಯೋಗಿ ಆದಿತ್ಯನಾಥ್ ವಿರುದ್ಧ ಅವರು ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳುವ ಸಿದ್ಧತೆಯಲ್ಲಿದ್ದಾರೆ ಎಂಬುದಕ್ಕೆ ಸಾಕ್ಷಿಯಾಗಿದೆ. ಇದನ್ನೂ ಓದಿ: ದೆಹಲಿ ರಿಮೋಟ್ ಕಂಟ್ರೋಲ್‍ಗೆ ಹೊಸ ಬ್ಯಾಟರಿಗಳು ಸೇರ್ಪಡೆ: ಸಿಧು

ಈ ಮುನ್ನ 2019ರ ರಾಷ್ಟ್ರೀಯ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಐದು ಲೋಕಸಭಾ ಸ್ಥಾನಗಳನ್ನು ಗೆದ್ದಿತ್ತು. ಅಖಿಲೇಶ್ ಯಾದವ್ ಅವರು ಪೂರ್ವ ಉತ್ತರ ಪ್ರದೇಶದ ಅಜಂಗಢದಿಂದ ಸಂಸದರಾಗಿದ್ದರು. ಆದರೆ ಇತ್ತೀಚೆಗೆ ಮಾರ್ಚ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಅಖಿಲೇಶ್ ಯಾದವ್ ಅವರು ತಮ್ಮ ಕುಟುಂಬದ ಭದ್ರಕೋಟೆಯಾದ ಕರ್ಹಾಲ್‍ನಿಂದ ಸ್ಪರ್ಧಿಸಿದರು. 2027ರ ಯುಪಿ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಯುಪಿ ವಿಧಾನಸಭೆಯಲ್ಲಿ ಬಿಜೆಪಿಯನ್ನು ಎದುರಿಸಲು ಯೋಜಿಸುತ್ತಿದ್ದಾರೆ ಎಂದು ಸೂಚಿಸುತ್ತದೆ. ಇದನ್ನೂ ಓದಿ: ಬಿಜೆಪಿ ಸರ್ಕಾರದಿಂದ ಜನರಿಗೆ ಹಣದುಬ್ಬರದ ಗೀಫ್ಟ್: ಅಖಿಲೇಶ್ ಯಾದವ್

ಈ ಬಾರಿ ನಡೆದ ಉತ್ತರ ಪ್ರದೇಶ ಚುನಾವಣೆಯಲ್ಲಿ ಅಖಿಲೇಶ್ ಯಾದವ್ ಅವರು ಬಿಜೆಪಿಯ ನೇರ ಪ್ರತಿಸ್ಪರ್ಧಿಯಾಗಿದ್ದರು. ಆದರೆ ಸಮಾಜವಾದಿ ಪಕ್ಷ 403 ಸ್ಥಾನಗಳ ಪೈಕಿ, 111 ಸ್ಥಾನಗಳನ್ನು ಪಡೆದು ಎರಡನೇ ಸ್ಥಾನವನ್ನು ಗಳಿಸಿತು. ಬಿಜೆಪಿ 255 ಸ್ಥಾನಗಳನ್ನು ಪಡೆದು ಮತ್ತೆ ಸರ್ಕಾರ ರಚಿಸಲು ಸಿದ್ಧವಾಗಿದೆ. ಮಿತ್ರಪಕ್ಷಗಳೊಂದಿಗೆ ಬಿಜೆಪಿ 273 ಸ್ಥಾನಗಳನ್ನು ಗಳಿಸಿದೆ.

Comments

Leave a Reply

Your email address will not be published. Required fields are marked *