ನಾಳೆಯಿಂದ ಬೆಂಗಳೂರಿನ ಗಾರ್ಡನ್‌ ಟರ್ಮಿನಲ್‌ನಿಂದ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳ ಟೇಕಾಫ್‌, ಲ್ಯಾಂಡಿಂಗ್‌

ಬೆಂಗಳೂರು: ಮಂಗಳವಾರದಿಂದ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳು (International Flight) ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದ (Kempegowda Airport) ಟರ್ಮಿನಲ್‌ 2ನಿಂದ (Terminal-2) ಟೇಕಾಫ್‌ ಮತ್ತು ಲ್ಯಾಂಡಿಂಗ್‌ ಆಗಲಿದೆ. ಅಂತಾರಾಷ್ಟ್ರೀಯ ವಿಮಾನಗಳ ಜೊತೆ ದೇಶೀಯ ವಿಮಾನಗಳು ಸಹ ಈ ಟರ್ಮಿನಲ್‌ನಿಂದಲೇ ಕಾರ್ಯಾಚರಣೆ ನಡೆಸಲಿವೆ.

ಈ ಸಂಬಂಧ ಬಿಎಲ್‌ಆರ್‌ ಏರ್‌ಪೋರ್ಟ್‌ ಟ್ವೀಟ್‌ ಮಾಡಿದ್ದು, ಸೆ.12ರ ಬೆಳಗ್ಗೆ 10:45 ರಿಂದ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳ ಜೊತೆ ದೇಶೀಯ ಸೇವೆ ನೀಡುವ ಏರ್‌ ಏಷ್ಯಾ, ಏರ್‌ ಇಂಡಿಯಾ, ಸ್ಟಾರ್‌ ಏರ್‌, ವಿಸ್ತಾರಾ ಕಂಪನಿಗಳ ವಿಮಾನ ಕಾರ್ಯಾಚರಣೆ ಟರ್ಮಿನಲ್‌ 2 ನಿಂದ ಆಗಲಿದೆ. ಆಕಾಸಾ ಏರ್‌, ಅಲೈಯನ್ಸ್‌ ಏರ್‌, ಇಂಡಿಗೋ, ಸ್ಪೈಸ್‌ ಜೆಟ್‌ ವಿಮಾನಗಳು ಟರ್ಮಿನಲ್‌ 1 ರಲ್ಲಿ ಟೇಕಾಫ್‌, ಲ್ಯಾಂಡಿಂಗ್‌ ಆಗಲಿದೆ ಎಂದು ತಿಳಿಸಿದೆ.

ನಿಗದಿ ಪ್ರಕಾರ ಆಗಸ್ಟ್‌ 31 ರಿಂದಲೇ ಟರ್ಮಿನಲ್‌ 2 ರಿಂದ ಅಂತರರಾಷ್ಟ್ರೀಯ ವಿಮಾನಗಳ ಕಾರ್ಯಾಚರಣೆ ಆರಂಭವಾಗಬೇಕಿತ್ತು. ಆದರೆ ತಾಂತ್ರಿಕ ಕಾರಣ ಮತ್ತು ಪ್ರಯಾಣಿಕರ ಸುರಕ್ಷತಾ ದೃಷ್ಟಿಯಿಂದ ಕೊನೆ ಕ್ಷಣದಲ್ಲಿ ವಿಮಾನ ನಿಲ್ದಾಣದ ನಿರ್ವಹಣಾ ಮಂಡಳಿ ಕಾರ್ಯಾಚರಣಾ ದಿನಾಂಕವನ್ನು ಮುಂದೂಡಿತ್ತು. ಇದನ್ನೂ ಓದಿ: ಇಂಡಿಯಾ ಪಾಕ್ ಪಂದ್ಯಕ್ಕೆ ಮಳೆ ಕಾಟ – ಅಲ್ಲಾ ನಮ್ಮನ್ನು ಕಾಪಾಡಿದ ಎಂದ ಅಖ್ತರ್

ಕಳೆದ ವರ್ಷದ ನವೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಸುಮಾರು 5,000 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್‌-2 ಉದ್ಘಾಟಿಸಿದ್ದರು. ಈ ವರ್ಷದ ಜನವರಿ 15 ದಿಂದ ದೇಶೀಯ ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು.

ಟರ್ಮಿನಲ್-2 ಅನ್ನು ಗಾರ್ಡನ್ ಟರ್ಮಿನಲ್(Garden Terminal) ಎಂದು ಕರೆಯಲಾಗುತ್ತದೆ. ಏಕೆಂದರೆ ಇದು ದೊಡ್ಡ ಕೃತಕ ಒಳಾಂಗಣ ಉದ್ಯಾನವನ್ನು ಹೊಂದಿದೆ. ಬೆಂಗಳೂರನ್ನು ಭಾರತದ ʼಗಾರ್ಡನ್‌ ಸಿಟಿʼಎಂದು ಕರೆಯಲಾದ ಬಿರುದನ್ನು ಎತ್ತಿಹಿಡಿಯಲಿದೆ ಎಂದೇ ವ್ಯಾಖ್ಯಾನಿಸಲಾಗಿದೆ. ಪ್ರಯಾಣಿಕರಿಗೆ ಉದ್ಯಾನವನದ ಅನುಭವ ನೀಡಲು ಕೃತಕ ಮರಗಿಡಗಳು, ಹಕ್ಕಿಗಳ ಕಲರವ-ಚಿಲಿಪಿಲಿ ನಾದವನ್ನು ಇಲ್ಲಿ ಕೇಳಬಹುದು.

 

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]