ಫಸ್ಟ್‌ನೈಟ್‌ನಲ್ಲಿ ಸೆಕ್ಸ್‌ಗೆ ಗಂಡ ನಿರಾಕರಿಸಿದ್ದಕ್ಕೆ ಪತ್ನಿಯಿಂದ 2 ಕೋಟಿ ಹಣಕ್ಕೆ ಡಿಮ್ಯಾಂಡ್ ಆರೋಪ

ಬೆಂಗಳೂರು: ಫಸ್ಟ್‌ನೈಟ್‌ನಲ್ಲಿ ಲೈಂಗಿಕ ಕ್ರಿಯೆಯಲ್ಲಿ ತೊಡಗದಿದ್ದಕ್ಕೆ ಪತ್ನಿ ಹಾಗೂ ಕುಟುಂಬದವರು 2 ಕೋಟಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆಂದು ಆರೋಪಿಸಿ ಗಂಡ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.

ನೊಂದ ಪತಿ ಪ್ರವೀಣ್ ಎಂಬಾತ ಗೋವಿಂದರಾಜ ನಗರ ಪೊಲೀಸ್ ಠಾಣೆಯಲ್ಲಿ ಪತ್ನಿ ಹಾಗೂ ಪತ್ನಿ ಸಂಬಂಧಿಕರ ವಿರುದ್ಧ ದೂರು ನೀಡಿದ್ದಾರೆ. ದೂರಿನಲ್ಲಿ ಜೀವನಾಂಶಕ್ಕೆ ಪತ್ನಿ ಬರೋಬ್ಬರಿ ಎರಡು ಕೋಟಿ ಹಣಕ್ಕೆ ಡಿಮ್ಯಾಂಡ್ ಮಾಡುತ್ತಿದ್ದಾರೆಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಮಡಿಕೇರಿ | ನೇಣು ಬಿಗಿದು 20ರ ಯುವತಿ ಆತ್ಮಹತ್ಯೆ

ಪ್ರವೀಣ್ ಕಳೆದ ಮೇ ತಿಂಗಳಲ್ಲಿ ಚಿಕ್ಕಮಗಳೂರು ಮೂಲದ ಯುವತಿಯನ್ನ ವಿವಾಹವಾಗಿದ್ದ. ಮದುವೆಯಾಗಿ ಫಸ್ಟ್‌ನೈಟ್ ವೇಳೆ ಪತ್ನಿಯನ್ನು ಮುಟ್ಟಲು ಗಂಡ ಪ್ರವೀಣ್ ಹಿಂದೇಟು ಹಾಕಿದ್ದಾರೆಂದು ಆರೋಪ ಮಾಡಲಾಗಿದೆ. ಮದುವೆ ಆದ ಗಂಡ ನಪುಂಸಕ ಎಂದು ಪತ್ನಿಯಿಂದ ಗಲಾಟೆ ಮಾಡಿದ್ದಾರೆಂದು ಆರೋಪಿಸಲಾಗಿದೆ.

ಗಂಡನ ಬಗ್ಗೆ ಅನುಮಾನಗೊಂಡು ಪತ್ನಿ ಕುಟುಂಬಸ್ಥರು ವೈದ್ಯಕೀಯ ಪರೀಕ್ಷೆ ಮಾಡಿಸಿದ್ದರು. ಪರೀಕ್ಷೆಯಲ್ಲಿ ಲೈಂಗಿಕ ಕ್ರಿಯೆ ನಡೆಸಲು ಸಮರ್ಥನಾಗಿದ್ದಾನೆಂದು ವೈದ್ಯರು ದೃಢಪಡಿಸಿದ್ದರು. ಆದರೆ, ‘ಮಾನಸಿಕ ಒತ್ತಡದಿಂದ ಸ್ಬಲ್ಪ ಹಿಂದೇಟು ಹಾಕಿರಬಹುದು. ಸ್ವಲ್ಪ ತಾಳ್ಮೆಯಿಂದಿರುವಂತೆ’ ವೈದ್ಯರು ಸಲಹೆ ನೀಡಿದ್ದರು. ತಾಳ್ಮೆ ಕಳೆದುಕೊಂಡ ಪತ್ನಿ ಹಾಗೂ ಕುಟುಂಬಸ್ಥರಿಂದ ದಾಂದಲೆ ನಡೆಸಲಾಗಿದೆ. ಆ.17 ರಂದು ಪ್ರವೀನ್‌ನ ಗೋವಿಂದರಾಜನಗರ ಮನೆಗೆ‌ ನುಗ್ಗಿ ಪತ್ನಿ ಕುಟುಂಬಸ್ಥರು ಹಲ್ಲೆ ನಡೆಸಿದ್ದಾರೆಂಬ ಆರೋಪವಿದೆ. ಇದನ್ನೂ ಓದಿ: ಕಾರವಾರ| ಸಿಲಿಂಡರ್‌ ಸ್ಫೋಟಗೊಂಡು ಯುವತಿ ಸಾವು

ಬಂದು ಗಲಾಟೆ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಇತ್ತ ಘಟನೆ ಸಂಬಂಧ ಗಂಡ ಹಾಗೂ ಸಂಬಂಧಿಕರ ವಿರುದ್ಧ ಪಶ್ಚಿಮ ವಿಭಾಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪತ್ನಿಯಿಂದ ವರದಕ್ಷಿಣೆ ಕಿರುಕುಳ ಕೇಸ್ ಕೂಡ ದಾಖಲಾಗಿದೆ.