‘ಪುಷ್ಪ 2’ ಕಾಲ್ತುಳಿತ ಪ್ರಕರಣ: ಅಲ್ಲು ಅರ್ಜುನ್‌ಗೆ ಜಾಮೀನು ಮಂಜೂರು

‘ಪುಷ್ಪ 2′ (Pushpa 2) ಕಾಲ್ತುಳಿತ ಪ್ರಕರಣ ಸಂಬಂಧ ಅಲ್ಲು ಅರ್ಜುನ್‌ಗೆ (Allu Arjun) ಇಂದು (ಜ.3) ಹೈದರಾಬಾದ್‌ನ ನಾಂಪಲ್ಲಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ:ಕನ್ನಡದ ಹೊಸ ಸಿನಿಮಾದಲ್ಲಿ ‘ಜೇಮ್ಸ್’ ನಟಿ ಪ್ರಿಯಾ ಆನಂದ್

ಡಿಸೆಂಬರ್ 31ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್ ಇಂದಿಗೆ ಆದೇಶ ಕಾಯ್ದಿರಿಸಿತ್ತು. ಮಧ್ಯಂತರ ಬೇಲ್‌ನಲ್ಲಿದ್ದ ಅಲ್ಲು ಅರ್ಜುನ್‌ಗೆ ಇಂದು ರೆಗ್ಯುಲರ್ ಬೇಲ್ ಸಿಕ್ಕಿದೆ.

ಡಿ.4ರಂದು ‘ಪುಷ್ಪ 2’ ಪ್ರೀಮಿಯರ್ ವೇಳೆ, ಕಾಲ್ತುಳಿತದಿಂದ ರೇವತಿ ಎಂಬುವವರು ಸಾವನ್ನಪ್ಪಿದ್ದರು. ಈ ಹಿನ್ನೆಲೆ ಅಲ್ಲು ಅರ್ಜುನ್‌ರನ್ನು ಡಿ.13 ಹೈದರಾಬಾದ್‌ನ ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದರು. ಬಳಿಕ ಅಲ್ಲು ಅರ್ಜುನ್‌ಗೆ ಮಧ್ಯಂತರ ಜಾಮೀನು ಮಂಜೂರಾಗಿತ್ತು.