ಅಂಬರೀಶ್ ಜನ್ಮದಿನ; ಪೂಜೆ ಸಲ್ಲಿಸಿದ ಕುಟುಂಬ, ಫ್ಯಾನ್ಸ್

ಹೆಸರಾಂತ ಹಿರಿಯ ನಟ ಅಂಬರೀಶ್ (Ambarish) ಅವರ ಹುಟ್ಟುಹಬ್ಬವನ್ನು (Birthday) ಅಭಿಮಾನಿಗಳು ಮತ್ತು ಅವರ ಕುಟುಂಬ ಬೆಂಗಳೂರಿನ ಕಂಠೀರವ ಸ್ಟುಡಿಯೋದ ಅಂಬಿ ಸಮಾಧಿ ಬಳಿ ಆಚರಿಸಿದರು. ಅಂಬರೀಶ್ ಅವರ ಸಮಾಧಿಗೆ ಪೂಜೆ ಸಲ್ಲಿಸುವ ಮೂಲಕ ಹುಟ್ಟು ಹಬ್ಬವನ್ನು ಆಚರಿಸಲಾಯಿತು.

ಬೆಳಗ್ಗೆ ಅಂಬರೀಶ್ ಸಮಾಧಿ ಬಳಿ ಆಗಮಿಸಿದ ಸುಮಲತಾ ಅಂಬರೀಶ್, ಅಭಿಷೇಕ್ ಅಂಬರೀಶ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮತ್ತು ಅಸಂಖ್ಯಾತ ಅಭಿಮಾನಿಗಳು ಸಮಾಧಿಗೆ ಪೂಜೆ ಸಲ್ಲಿಸಿದರು. ಕುಟುಂಬಸ್ಥರು ಪೂಜೆ ಸಲ್ಲಿಸಿದ ನಂತರ ಅಭಿಮಾನಿಗಳು ಕೂಡ ತಮ್ಮ ನೆಚ್ಚಿನ ನಟನ ಸಮಾಧಿಗೆ ಪೂಜೆ ಸಲ್ಲಿಸಿದರು.

 

ಅಂಬರೀಶ್ ಅವರ ಹುಟ್ಟು ಹಬ್ಬದ ನಿಮಿತ್ತ ಮಂಡ್ಯದಲ್ಲಿ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿಭಾ ಪುರಸ್ಕಾರ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.