ಅಮಿತಾಬ್ ಬಚ್ಚನ್‍ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ

ನವದೆಹಲಿ: ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್‍ಗೆ ದಾದಾ ಸಾಹೇಬ್ ಫಾಲ್ಕೆ ಗೌರವ ಸಂದಿದೆ. ಸಿನಿ ಕ್ಷೇತ್ರದ ಪ್ರತಿಷ್ಠಿತ ಪ್ರಶಸ್ತಿಗೆ ಸರ್ವಾನುಮತವಾಗಿ ಬಿಗ್ ಬಿ ಹೆಸರನ್ನು ಆರಿಸಲಾಗಿದೆ.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆಯ ಸಚಿವ ಪ್ರಕಾಶ್ ಜಾವಡೇಕರ್ ಟ್ವೀಟ್ ಮಾಡಿ ಈ ವಿಚಾರವನ್ನು ತಿಳಿಸಿದ್ದಾರೆ. ಎರಡು ತಲೆಮಾರಿನ ಜನತೆಗೆ ಮನರಂಜನೆ ನೀಡಿರುವ ದಂತಕತೆ ಅಮಿತಾಬ್ ಬಚ್ಚನ್ ಅವರು ಅವಿರೋಧವಾಗಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ದೇಶ ಮತ್ತು ಅಂತಾರಾಷ್ಟ್ರೀಯ ಸಮುದಾಯಕ್ಕೆ ಸಂತಸ ತಂದಿದೆ. ನನ್ನ ಹೃದಯಪೂರ್ವಕ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ.

ಭಾರತೀಯ ಚಿತ್ರರಂಗದಲ್ಲಿನ ಜೀವಮಾನದ ಸಾಧನೆ ನಿರ್ಮಿಸಿದ ಕಲಾವಿದರಿಗೆ ಭಾರತ ಸರ್ಕಾರ ಈ ವಾರ್ಷಿಕ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತದೆ. ಭಾರತೀಯ ಚಿತ್ರರಂಗದ ಪಿತಾಮಹರಾಗಿರುವ ದಾದಾಸಾಹೇಬ್ ಫಾಲ್ಕೆ ಅವರ ‘ಜನ್ಮ ಶತಾಬ್ದಿಯ ವರ್ಷ’ವಾದ 1969ರಲ್ಲಿ ಈ ಪ್ರಶಸ್ತಿಯನ್ನು ನೀಡುವ ಪರಂಪರೆ ಆರಂಭವಾಯಿತು. ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದ ವೇಳೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.

2017ರಲ್ಲಿ ವಿನೋದ್ ಖನ್ನ ಅವರಿಗೆ ಈ ಪ್ರಶಸ್ತಿ ಸಿಕ್ಕಿದ್ದರೆ 1995ರಲ್ಲಿ ಡಾ. ರಾಜ್ ಕುಮಾರ್ ಅವರು ಈ ಗೌರವಕ್ಕೆ ಪಾತ್ರರಾಗಿದ್ದರು.

Comments

Leave a Reply

Your email address will not be published. Required fields are marked *