ಶ್ರೀಕೃಷ್ಣ ಜನ್ಮಭೂಮಿಯಲ್ಲಿರೋ ಮಸೀದಿಗಳನ್ನು ಹಿಂದೂಗಳಿಗೆ ಹಸ್ತಾಂತರಿಸಿ: ಯುಪಿ ಸಚಿವ

ಲಕ್ನೋ: ಶ್ರೀಕೃಷ್ಣ ಜನ್ಮಭೂಮಿ ಮಥುರಾದಲ್ಲಿರುವ ದೇವಸ್ಥಾನದ ಸುತ್ತಮುತ್ತ ಇರುವ ಮಸೀದಿಗಳನ್ನು ಮುಸ್ಲಿಮರು, ಹಿಂದೂಗಳಿಗೆ ಹಸ್ತಾಂತರಿಸಬೇಕು ಎಂದು ಉತ್ತರ ಪ್ರದೇಶ ಸಚಿವ ಆನಂದ್‌ ಸ್ವರೂಪ್‌ ಶುಕ್ಲಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸಚಿವರು ತಮ್ಮ ಪ್ರಚೋದನಕಾರಿ ಭಾಷಣದಲ್ಲಿ, ಅಯೋಧ್ಯೆ ವಿವಾದವನ್ನು ನ್ಯಾಯಾಲಯ ಬಗೆಹರಿಸಿತು. ವಾರಣಾಸಿ ಮತ್ತು ಮಥುರಾದಲ್ಲಿರುವ ಬಿಳಿ ಬಣ್ಣದ ಕಟ್ಟಡಗಳು (ಮಸೀದಿಗಳು) ಹಿಂದೂಗಳ ಮನಸ್ಸಿಗೆ ನೋವುಂಟು ಮಾಡುತ್ತಿವೆ. ನ್ಯಾಯಾಲಯದ ಸಹಕಾರದೊಂದಿಗೆ ಈ ಕಟ್ಟಡಗಳನ್ನು ತೆರವುಗೊಳಿಸುವ ಕಾಲ ಬರಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಮೇಲೆ ಮೃದು ಧೋರಣೆ ತೋರಿದ ನಿರಾಣಿ

ರಾಮ ಮತ್ತು ಕೃಷ್ಣ ತಮ್ಮ ಪೂರ್ವಜರು, ಬಾಬರ್‌, ಅಕ್ಬರ್‌ ಮತ್ತು ಔರಂಗಜೇಬ್‌ ಆಕ್ರಮಣಕಾರರು ಎಂದು ಭಾರತದ ಮುಸ್ಲಿಮರು ನಂಬಬೇಕೆಂದು ರಾಮ್‌ ಮನೋಹರ್‌ ಲೋಹಿಯಾ ಹೇಳಿದ್ದರು. ಹೀಗಾಗಿ ಬಾಬರ್‌ರಂಥವರು ನಿರ್ಮಿಸಿದ ಯಾವುದೇ ಕಟ್ಟಡದೊಂದಿಗೆ ನಿಮ್ಮ ಸಂಬಂಧವನ್ನು ಮಾಡಿಕೊಳ್ಳಬೇಡಿ ಎಂದು ಶುಕ್ಲಾ ತಿಳಿಸಿದ್ದಾರೆ.

ಶ್ರೀಕೃಷ್ಣ ಜನ್ಮಭೂಮಿಯ ಸಂಕೀರ್ಣದ ಸುತ್ತಮುತ್ತ ಇರುವ ಮಸೀದಿಗಳನ್ನು ಮುಸ್ಲಿಂ ಸಮುದಾಯದವರು ಹಿಂದೂಗಳಿಗೆ ಹಸ್ತಾಂತರಿಸಬೇಕು. ಮುಸ್ಲಿಮರು ಹಿಂದೂ ಧರ್ಮಕ್ಕೆ ವಾಪಸ್ಸಾಗಬೇಕು (ಘರ್‌ ವಾಪ್ಸಿ) ಎಂದು ಹೇಳಿದ್ದಾರೆ. ಇದನ್ನೂ ಓದಿ: ಏಳಕ್ಕೆ ಏಳು ಜೆಡಿಎಸ್ ಶಾಸಕರಿದ್ದರೂ ಮಂಡ್ಯ ಅಭಿವೃದ್ಧಿಯಾಗಿಲ್ಲ ಯಾಕೆ: ಸಿದ್ದರಾಮಯ್ಯ

ಭಾರತದಲ್ಲಿರುವ ಎಲ್ಲಾ ಮುಸ್ಲಿಮರು ಮತಾಂತರಗೊಂಡವರು. 200-250 ವರ್ಷಗಳ ಇತಿಹಾಸವನ್ನು ಗಮನಿಸಿದರೆ, ಅವರೆಲ್ಲ ಹಿಂದೂ ಧರ್ಮದಿಂದ ಇಸ್ಲಾಂ ಧರ್ಮಕ್ಕೆ ಮತಾಂತರ ಆಗಿದ್ದಾರೆ. ಅವರೆಲ್ಲರೂ ಹಿಂದೂ ಧರ್ಮಕ್ಕೆ (ಘರ್‌ ವಾಪ್ಸಿ) ವಾಪಸ್‌ ಬರಬೇಕು ಎಂಬುದೇ ನಮ್ಮ ಆಶಯ ಎಂದು ಶುಕ್ಲಾ ಅಭಿಪ್ರಾಯಪಟ್ಟಿದ್ದಾರೆ.

Comments

Leave a Reply

Your email address will not be published. Required fields are marked *