ಪುಡಿ ರೌಡಿಗಳ ಜೊತೆ ಶಾಸಕರ ಮೀಟಿಂಗ್? – ಮತ್ತೊಂದು ವಿವಾದ ಮೈಮೇಲೆಳೆದುಕೊಂಡ ಸತೀಶ್ ರೆಡ್ಡಿ

ಬೆಂಗಳೂರು: ಇತ್ತೀಚೆಗೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ನಡುವೆ ಬೊಮ್ಮನಹಳ್ಳಿ (Bommanahalli) ವಿಧಾನಸಭಾ ಕ್ಷೇತ್ರದಲ್ಲಿ ಸಾಕಷ್ಟು ರೀತಿಯ ಬೆಳವಣಿಗೆಗಳು ನಡೆಯುತ್ತಿದ್ದು, ಇದೀಗ ಪುಡಿ ರೌಡಿಗಳ (Rowdy) ಜೊತೆ ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಎಂ ಸತೀಶ್ ರೆಡ್ಡಿ (Satish Reddy) ಸಭೆಯನ್ನು ನಡೆಸಿದ್ದಾರೆ ಎನ್ನಲಾದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಚುನಾವಣೆ ಹತ್ತಿರವಾಗುತ್ತಿದ್ದಂತೆ ಸತೀಶ್ ರೆಡ್ಡಿ ತಮ್ಮ ಮನೆಯಲ್ಲಿ ಕೆಲ ಹುಡುಗರನ್ನು ಕರೆಸಿ ಸಭೆಯೊಂದನ್ನು ಮಾಡಿದ್ದಾರೆ. ಅವರ ಜೊತೆ ತೆಲುಗಿನಲ್ಲಿ ಮಾತನಾಡುತ್ತಿರುವ ವೀಡಿಯೋ ಇದೀಗ ಎಲ್ಲೆಡೆ ಹರಿದಾಡುತ್ತಿದೆ. ಈ ವೀಡಿಯೋದಲ್ಲಿ ‘ನಿಮಗೇನು ಸಪೋರ್ಟ್ ಬೇಕು ಅದನ್ನು ನಾನು ಕೊಡಿಸುತ್ತೇನೆ. ಚುನಾವಣೆ ಸಮಯದಲ್ಲಿ ಮೆಂಟಲಿ ಟಾರ್ಚರ್ ಕೊಡುತ್ತಿದ್ದಾರೆ. ನಿಮಗೆ ಯಾವ ಸಪೋರ್ಟ್ ಬೇಕು ಅದು ನಮ್ಮಿಂದ ಇರುತ್ತದೆ’ ಎನ್ನುವ ಮಾತುಗಳನ್ನಾಡಿರುವ ದೃಶ್ಯವಿದೆ. ಇದನ್ನೂ ಓದಿ: ಚುನಾವಣೆ ಹೊತ್ತಲ್ಲೇ ಆಡಿಯೋ ಬಾಂಬ್- ರೇವಣ್ಣ, ಶಿವಲಿಂಗೇಗೌಡ ಮಾತುಕತೆ ಆಡಿಯೋ ವೈರಲ್

ಚುನಾವಣೆ ಹಿನ್ನೆಲೆ ರೌಡಿಶೀಟರ್ ಹಾಗೂ ಪುಡಿ ರೌಡಿಗಳ ಜೊತೆ ಬೊಮ್ಮನಹಳ್ಳಿ ಶಾಸಕರು ಮೀಟಿಂಗ್ ಮಾಡಿದ್ದಾರೆ ಎಂಬುದಾಗಿ ಎಲ್ಲೆಡೆ ಈ ವೀಡಿಯೋ ಹರಿದಾಡುತ್ತಿದೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಉಮಾಪತಿ ಗೌಡ ವಿರುದ್ಧ ಗೆಲ್ಲಲು ಹೊಸ ತಂತ್ರಗಳನ್ನು ರೂಪಿಸುತ್ತಿದ್ದಾರೆ ಎಂಬ ಮಾತು ಸಹ ಕೇಳಿ ಬರುತ್ತಿದೆ.

ಕಳೆದ ಕೆಲವು ದಿನಗಳ ಹಿಂದೆ ಪುಡಿ ರೌಡಿಯೊಬ್ಬ ಸತೀಶ್ ರೆಡ್ಡಿ ಕೊಲೆಗೆ ಸಂಚು ರೂಪಿಸಿದ್ದ ಎನ್ನುವ ಆಡಿಯೋ ಬಯಲಾಗಿತ್ತು. ಇದಾದ ಬಳಿಕ ಈಗ ಸತೀಶ್ ರೆಡ್ಡಿ ರೌಡಿಗಳ ಜೊತೆ ಕಾಣಿಸಿಕೊಂಡಿದ್ದಾರೆ ಎನ್ನುವ ವೀಡಿಯೋ ಬಯಲಾಗಿದ್ದು, ಪ್ರತಿಪಕ್ಷಗಳಿಗೆ ಈ ವಿವಾದಗಳು ವರದಾನವಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಬಿಡಿಎದಿಂದ ಕರಗ ಮಂಟಪ ಅಭಿವೃದ್ಧಿಗೆ 6 ಕೋಟಿ ರೂ.: ಎಸ್.ಆರ್ ವಿಶ್ವನಾಥ್

Comments

Leave a Reply

Your email address will not be published. Required fields are marked *