ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು – ಸಾವಿನ ಸಂಖ್ಯೆ 12ಕ್ಕೆ ಏರಿಕೆ

ರಾಯಚೂರು: ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವು ಮುಂದುವರೆದಿದ್ದು, ಇದೀಗ ಮತ್ತೋರ್ವ ಬಾಣಂತಿ ಸಾವನ್ನಪ್ಪಿರುವ ಘಟನೆ ರಾಯಚೂರಿನ (Raichuru) ರಿಮ್ಸ್ ಆಸ್ಪತ್ರೆಯಲ್ಲಿ (RIMS Hospital)  ನಡೆದಿದೆ.

ಮೃತ ಬಾಣಂತಿಯನ್ನು ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಸರಸ್ವತಿ (24) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಆನೇಕಲ್‌ನಲ್ಲಿ ಸಿಲಿಂಡರ್ ಸ್ಫೋಟ – ತೀವ್ರತೆಗೆ ಕಟ್ಟಡದ ಒಂದು ಮಹಡಿ ಸಂಪೂರ್ಣ ಛಿದ್ರ

ಜ.2 ರಂದು ರಿಮ್ಸ್ ಆಸ್ಪತ್ರೆಯಲ್ಲಿ ಸಿಸೇರಿಯನ್ ಹೆರಿಗೆಯಾಗಿತ್ತು. ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಜ.5 ಸಾವನ್ನಪ್ಪಿದ್ದಾರೆ. ಸದ್ಯ ವೆಂಟಿಲೇಟರ್‌ನಲ್ಲಿ ಶಿಶುವಿಗೆ ಚಿಕಿತ್ಸೆ ಮುಂದುವರೆದಿದೆ. ನಾಲ್ಕನೇ ಮಗುವಿಗೆ ಜನ್ಮ ನೀಡಿದ್ದ ತಾಯಿ ಸರಸ್ವತಿ ಸಾವಿನಿಂದ ಕುಟುಂಬಸ್ಥರು ಕಂಗಾಲಾಗಿದ್ದಾರೆ.

ಜಿಲ್ಲೆಯಲ್ಲಿ ಕಳೆದ ನಾಲ್ಕು ತಿಂಗಳಲ್ಲಿ ಒಟ್ಟು 12 ಬಾಣಂತಿಯರು ಮೃತಪಟ್ಟಿದ್ದಾರೆ.ಇದನ್ನೂ ಓದಿ: ಯಶ್ ಫ್ಯಾನ್ಸ್‌ಗೆ ಸರ್ಪ್ರೈಸ್- ‘ಟಾಕ್ಸಿಕ್’ ಟೀಮ್‌ನಿಂದ ಸಿಕ್ತು ಸಿಹಿ ಸುದ್ದಿ