ದಕ್ಷಿಣ ಕನ್ನಡದಲ್ಲಿ ನಿಲ್ಲದ ದುಷ್ಕರ್ಮಿಗಳ ಅಟ್ಟಹಾಸ- ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ

ಮಂಗಳೂರು: ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಬಳಿಕ ದಕ್ಷಿಣಕನ್ನಡ ಜಿಲ್ಲೆ ಬೂದಿ ಮುಚ್ಚಿದ ಕೆಂಡದಂತಾಗಿದೆ. ಕಲ್ಲು ತೂರಾಟದ ನಡುವೆಯೇ ಶನಿವಾರ ಶರತ್ ಅಂತಿಮಯಾತ್ರೆ ಕೂಡಾ ನಡೆಯಿತು. ಇತ್ತ ಪ್ರಕ್ಷುಬ್ಧಗೊಂಡಿರುವ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಮತ್ತೊಂದು ಕೊಲೆ ಯತ್ನ ನಡೆದಿದೆ.

ಮಂಗಳೂರು ಹೊರವಲಯದ ಕುತ್ತಾರು ರಾಣಿಪುರದಲ್ಲಿ ಯುವಕನ ಮೇಲೆ ತಲವಾರಿನಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಅಂಬ್ಲಮೊಗರು ನಿವಾಸಿಯಾಗಿರುವ ಚಿರಂಜೀವಿ ಮೇಲೆ ನಿನ್ನೆ ಬೈಕಿನಲ್ಲಿ ಚಲಿಸುತ್ತಿದ್ದ ವೇಳೆ ಮೂವರು ದುಷ್ಕರ್ಮಿಗಳು ಏಕಾಏಕಿ ತಲವಾರಿನಿಂದ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿರುವ ಬಜರಂಗದಳದ ಕಾರ್ಯಕರ್ತ ಚಿರಂಜೀವಿ ಸದ್ಯ ದೇರಳಕಟ್ಟೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಸಾವು-ಬದುಕಿನ ಜೊತೆಗೆ ಹೋರಾಡುತ್ತಿದ್ದಾರೆ.

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಪ್ರಕರಣ ಭೇಧಿಸುವ ಮುನ್ನವೇ ಇದೀಗ ಮತ್ತೊಂದು ಪ್ರಕರಣ ನಡೆದಿರುವುದು ಪೊಲೀಸರ ತಲೆನೋವು ಜಾಸ್ತಿಮಾಡಿದೆ.

https://www.youtube.com/watch?v=o40hIeKFh8E

https://www.youtube.com/watch?v=1DwTIz6sVmQ

https://www.youtube.com/watch?v=bHr6olvlgmU

Comments

Leave a Reply

Your email address will not be published. Required fields are marked *