ದೆಹಲಿಯಲ್ಲಿ ಜೆಸಿಬಿ ಘರ್ಜನೆ- ಜಹಾಂಗೀರ್‌ಪುರಿಯಲ್ಲಿ ಅಕ್ರಮ ಆಸ್ತಿಗಳ ಧ್ವಂಸ

ನವದೆಹಲಿ: ಇತ್ತೀಚೆಗೆ ಹನುಮ ಜಯಂತಿ ವೇಳೆ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಅತಿಕ್ರಮಣ ವಿರೋಧಿ ಅಭಿಯಾನ ಬುಧವಾರ ಬೆಳಗ್ಗೆ ಪೊಲೀಸ್ ಹಾಗೂ ಅರೆಸೇನಾ ಪಡೆಗಳ ನಿಯೋಜನೆಯಲ್ಲಿ ಪ್ರಾರಂಭವಾಗಿದ್ದು, ಬುಲ್ಡೋಜರ್ ಬಳಸಿ ಅಕ್ರಮ ಕಟ್ಟಡಗಳನ್ನು ಒಡೆದು ಹಾಕಿದ್ದಾರೆ.

ರಸ್ತೆ ಬದಿಯ ಆಹಾರ ಮಳಿಗೆಗಳು ಮತ್ತು ಅಂಗಡಿಗಳನ್ನು ಬುಲ್ಡೋಜರ್ ಮೂಲಕವಾಗಿ ಕೆಡವಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಸಾರ್ವಜನಿಕರು ಭಾರೀ ಪ್ರಮಾಣದಲ್ಲಿ ನೆರೆದಿದ್ದು, ಪೊಲೀಸ್ ಸಿಬ್ಬಂದಿ ಪರಿಸ್ಥಿತಿಯನ್ನು  ಹತೋಟಿಯಲ್ಲಿಡಲು ಪ್ರಯತ್ನಿಸುತ್ತಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲೂ ಪ್ರಾರಂಭವಾಯ್ತು ಬುಲ್ಡೋಜರ್ ಸದ್ದು

ಈ ಬಗ್ಗೆ ಜಹಾಂಗೀರ್‌ಪುರಿಯ ಸ್ಥಳೀಯರೊಬ್ಬರು ಮಾತನಾಡಿ, ಕಳೆದ 15 ವರ್ಷಗಳಿಂದ ನನ್ನ ಅಂಗಡಿ ಇಲ್ಲೇ ಇತ್ತು. ಅಕ್ರಮದ ಬಗ್ಗೆ ಮೊದಲು ಯಾರೂ ಚಕಾರ ಎತ್ತಲಿಲ್ಲ, ಈಗ ಎರಡು ಕೋಮುಗಳ ನಡುವೆ ಹಿಂಸಾಚಾರದ ಘಟನೆಯ ನಂತರ ಇದು ನಡೆಯುತ್ತಿದೆ ಎಂದು ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಕೆಂಪಣ್ಣ ಕನಕಪುರದ ಕಾಂಗ್ರೆಸ್ ಏಜೆಂಟ್, ಕಾಂಗ್ರೆಸ್ ದಾಸ: ಈಶ್ವರಪ್ಪ

ಈ ಹಿಂದೆ ದೆಹಲಿ ಉತ್ತರ ಮಹಾನಗರ ಪಾಲಿಕೆ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿತ್ತು. ಈ ಮನವಿಯಲ್ಲಿ ಏ.20 ಮತ್ತು 21ರಂದು ಅಕ್ರಮ ಕಟ್ಟಗಳನ್ನು ತೆರವುಗೊಳಿಸಲಾಗುತ್ತದೆ. ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ 400 ಪೊಲೀಸರ ಭದ್ರತೆ ಒದಗಿಸಬೇಕು ಎಂದು ಕೇಳಿಕೊಂಡಿತ್ತು. ಇದರ ಪ್ರಕಾರ ಅಧಿಕ ಪೊಲೀಸ್‌ ಭದ್ರೆತೆ ನೀಡಲಾಗಿತ್ತು.

Comments

Leave a Reply

Your email address will not be published. Required fields are marked *