ದಕ್ಷಿಣ ಆಫ್ರಿಕಾದಲ್ಲಿ ಅದ್ದೂರಿಯಾಗಿ ಹೊಸ ವರ್ಷ ಆಚರಿಸಿದ ವಿರಾಟ್ ಕೊಹ್ಲಿ ದಂಪತಿ

ಸೆಂಚುರಿಯನ್: ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ದಂಪತಿ ದಕ್ಷಿಣ ಆಫ್ರಿಕಾದಲ್ಲಿ ಹೊಸ ವರ್ಷವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ.

ನಟಿ ಅನುಷ್ಕಾ ಶರ್ಮಾ ಅವರು ರೆಸಾರ್ಟ್ ವೊಂದರಲ್ಲಿ ಹೊಸ ವರ್ಷವನ್ನು ಬರಮಾಡಿಕೊಂಡಿರುವ ಫೋಟೋ ಹಾಗೂ ವೀಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಫೋಟೋದಲ್ಲಿ ಈ ಜೋಡಿ ಸಿಬ್ಬಂದಿಯೊಂದಿಗೆ ಕೇಕ್ ಕತ್ತರಿಸುವ ಮೂಲಕ ಹೊಸ ವರ್ಷ ಆಚರಣೆಯನ್ನು ಅದ್ದೂರಿಯಾಗಿ ಸ್ವಾಗತಿಸಿದರು.

 

View this post on Instagram

 

A post shared by AnushkaSharma1588 (@anushkasharma)

ಕೇಕ್ ಕಟ್ ಮಾಡಿದ ನಂತರ ರೇಸಾರ್ಟ್ ನಲ್ಲಿರುವ ಸಿಬ್ಬಂದಿ ನೃತ್ಯ ಮಾಡುವ ಮೂಲಕ ಹೊಸ ವರ್ಷವನ್ನು ಬರಮಾಡಿಕೊಂಡಿದ್ದಾರೆ. ಸಿಬ್ಬಂದಿಯೊಂದಿಗೆ ಕೊಹ್ಲಿ ಹೊಸ ವರ್ಷ ಸಂಭ್ರಮಾಚರಣೆ ಮಾಡುತ್ತಿರುವ ವೀಡಿಯೋವನ್ನು ಅನುಷ್ಕಾ ಶರ್ಮಾ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.  ಇದನ್ನೂ ಓದಿ: ನ್ಯೂ ಇಯರ್ ಪಾರ್ಟಿ- ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಯುವಕರು

ಸದ್ಯ ಟೀಂ ಇಂಡಿಯಾ ತಂಡ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದೆ. ಈಗಾಗಲೇ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಅವರ ತವರು ನೆಲದಲ್ಲೇ ಟೀಂ ಇಂಡಿಯಾ ಬಗ್ಗು ಬಡಿದಿದೆ. ಈ ಪ್ರವಾಸದಲ್ಲಿ ವಿರಾಟ್ ಕೊಹ್ಲಿ ಅವರು ಪಾಲ್ಗೊಂಡಿದ್ದಾರೆ. ಪಂದ್ಯವನ್ನು ವೀಕ್ಷಿಸಲು ಪತ್ನಿ ಅನುಷ್ಕಾ ಶರ್ಮಾ ಮತ್ತು ಮಗಳು ವಮಿಕಾ ದಕ್ಷಿಣ ಆಫ್ರಿಕಾದಲ್ಲಿ ಇದ್ದಾರೆ. ಅಲ್ಲಿ ಈ ಜೋಡಿ ಅದ್ದೂರಿಯಾಗಿ ಹೊಸ ವರ್ಷವನ್ನು ಬರಮಾಡಿಕೊಂಡಿದೆ. ಇದನ್ನೂ ಓದಿ: ಕಳೆದ ವರ್ಷದಂತೆ ಈ ಬಾರಿಯೂ ಸರಳವಾಗಿಯೇ ಹೊಸ ವರ್ಷ ಆಚರಣೆ

 

Comments

Leave a Reply

Your email address will not be published. Required fields are marked *