ಅಪ್ಪು ಅಗಲಿ ಇಂದಿಗೆ 7 ತಿಂಗಳು : ಸಮಾಧಿ ಮುಂದೆ ಜನಸಾಗರ

ನ್ನಡದ ಹೆಸರಾಂತ ನಟ ಪುನೀತ್ ರಾಜ್ ಕುಮಾರ್ ಅಗಲಿ ಇಂದಿಗೆ ಏಳು ತಿಂಗಳು ಕಳೆದವು. ಏಳು ತಿಂಗಳು ಕಳೆದರೂ, ಅಪ್ಪು ಸಮಾಧಿಗೆ ಹರಿದು ಬರುತ್ತಿರುವ ಜನ ಸಾಗರ ಮಾತ್ರ ಕಿಂಚಿತ್ತೂ ಕಡಿಮೆ ಆಗಿಲ್ಲ. ಅದರಲ್ಲೂ ವೀಕೆಂಡ್ ನಲ್ಲಿ ಸಾವಿರಾರು ಜನರು ಅಪ್ಪು ಸಮಾಧಿಗೆ ಬಂದು ದರ್ಶನ ಪಡೆದುಕೊಂಡು ಹೋಗುತ್ತಿದ್ದಾರೆ. ಇದನ್ನೂ ಓದಿ : ರೆಬೆಲ್ ಅಂಬಿಗೆ ಇಂದು 70ನೇ ಹುಟ್ಟು ಹಬ್ಬ : ಭಾವುಕರಾಗಿ ಕವನ ಬರೆದ ಸುಮಲತಾ ಅಂಬರೀಶ್

ಇಂದು ಏಳು ತಿಂಗಳ ನಿಮಿತ್ತ ಅಪ್ಪು ಕುಟುಂಬ ಕಂಠೀರವ ಸ್ಟುಡಿಯೋಗೆ ಆಗಮಿಸಿ, ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಅಲ್ಲದೇ, ಇಂದು ಅಂಬರೀಶ್ ಅವರ ಹುಟ್ಟು ಹಬ್ಬವೂ ಇರುವುದರಿಂದ, ಅಪ್ಪು ಸಮಾಧಿಯ ಕೂಗಳತೆಯ ದೂರದಲ್ಲಿರುವ ಅಂಬರೀಶ್ ಅವರ ಸಮಾಧಿಗೂ ಅಪ್ಪು ಕುಟುಂಬ ನಮನ ಸಲ್ಲಿಸಿದೆ. ಇದನ್ನೂ ಓದಿ : ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನೂತನ ಸಾರಥಿ ಭಾ.ಮಾ. ಹರೀಶ್

ಅಪ್ಪು ಅಗಲಿಕೆಯನ್ನು ಇಂದಿಗೂ ಅಭಿಮಾನಿಗಳು ಅರಗಿಸಿಕೊಳ್ಳುವುದಕ್ಕೆ ಆಗುತ್ತಿಲ್ಲ. ಅದರಲ್ಲೂ ಪುನೀತ್ ರಾಜ್ ಕುಮಾರ್ ಸಹೋದರ ರಾಘವೇಂದ್ರ ರಾಜ್ ಕುಮಾರ್ ದಿನವೂ ಅಪ್ಪು ಅವರನ್ನು ನೆನಪಿಸಿಕೊಳ್ಳುತ್ತಲೇ ಇರುತ್ತಾರೆ. ಇಂದು ಅಪ್ಪು ಅವರ ವಿಶೇಷ ವಿಡಿಯೋವೊಂದನ್ನು ರಾಘವೇಂದ್ರ ರಾಜ್ ಕುಮಾರ್ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಎಂದೆಂದಿಗೂ ಅಪ್ಪು ನನ್ನ ಹೃದಯದಲ್ಲಿ ಇರುತ್ತಾರೆ ಎಂದು ತೋರಿಸಿದ್ದಾರೆ. ಓದಿ : ಶಾರುಖ್ ಖಾನ್ ಮನೆ ‘ಮನ್ನತ್’ ನೇಮ್ ಪ್ಲೇಟ್ ನಾಪತ್ತೆ: ಇದರ ಹಿಂದಿದೆ ಭಾರೀ ರಹಸ್ಯ

ಅಂಬರೀಶ್ ಅವರ ಹುಟ್ಟು ಹಬ್ಬ ಮತ್ತು ಪುನೀತ್ ಅವರ ಅಗಲಿಕೆಯ 7ನೇ ತಿಂಗಳು ಕಾರ್ಯಕ್ರಮ ಒಂದೇ ಸ್ಥಳದಲ್ಲೇ ನಡೆಯುತ್ತಿರುವುದರಿಂದ ಕಂಠೀರವ ಸ್ಟುಡಿಯೋ ಇಂದು ಇಬ್ಬರ ಅಭಿಮಾನಿಗಳಿಂದ ತುಂಬಿ ಹೋಗಿದೆ. ಒಂದು ಕಡೆ ಇಬ್ಬರೂ ಕಲಾವಿದರ ಅಗಲಿಕೆ ನೋವು ಮತ್ತು ಅಂಬಿ ಹುಟ್ಟು ಹಬ್ಬದ ಸಡಗರಕ್ಕೆ ಕಂಠೀರವ ಸ್ಟುಡಿಯೋ ಸಾಕ್ಷಿಯಾಗಿದೆ.

Comments

Leave a Reply

Your email address will not be published. Required fields are marked *