18 ಮಂದಿಗೆ ಕೊರೊನಾ- ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 463ಕ್ಕೆ ಏರಿಕೆ

– ಪಾದರಾಯನಪುರ ಪುಂಡರಿಂದ ರಾಮನಗರದಲ್ಲಿ ಆತಂಕ ಶುರು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಸಿಗುವಂತೆ ಕಾಣುತ್ತಿಲ್ಲ. ಇಂದು ಬೆಂಗಳೂರಿನ 11 ಜನರು ಸೇರಿದಂತೆ ರಾಜ್ಯದ 18 ಜನರಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 463ಕ್ಕೆ ಏರಿಕೆ ಕಂಡಿದೆ.

ರಾಮನಗರ ಜೈಲಿನಲ್ಲಿದ್ದ ಪಾದರಾಯನಪುರ ಪುಂಡರ ಪೈಕಿ ಐವರಿಗೆ ಕೊರೊನಾ ದೃಢಪಟ್ಟಿದ್ದು, ರಾಮನಗರ ಜಿಲ್ಲೆಯ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರಿನ 11 ಜನರಿಗೆ ಸೋಂಕು ತಗುಲಿರುವುದು ರಾಜಧಾನಿಯ ಜನರನ್ನು ಆತಂಕಕ್ಕೆ ದೂಡಿದೆ. ಇದನ್ನೂ ಓದಿ: ರಾಮನಗರ ಜೈಲಿನಲ್ಲಿ ಐವರಿಗೆ ಕೊರೊನಾ ದೃಢ: ಅಶ್ವತ್ಥನಾರಾಯಣ

ಸೋಂಕಿತರ ಮಾಹಿತಿ:
ರೋಗಿ-446: ಬೆಂಗಳೂರಿನ 49 ವರ್ಷದ ಮಹಿಳೆ. ಸಂಪರ್ಕದ ಮಾಹಿತಿ ಲಭ್ಯವಾಗಿಲ್ಲ.
ರೋಗಿ-447: ತುಮಕೂರಿನ 32 ವರ್ಷದ ಪುರುಷ. ಸೂರತ್-ಗುಜರಾತ್‍ಗೆ ಪ್ರಯಾಣ ಬೆಳೆಸಿದ ಹಿನ್ನಲೆ ಹೊಂದಿದ್ದಾರೆ.
ರೋಗಿ-448: ಬೆಳಗಾವಿ ಜಿಲ್ಲೆ ರಾಯಬಾಗ್‍ನ 10 ವರ್ಷದ ಬಾಲಕಿ. ರೋಗಿ-150ರ ಸಂಪರ್ಕದಲ್ಲಿದ್ದರು.
ರೋಗಿ-449: ಬೆಂಗಳೂರಿನ 30 ವರ್ಷದ ಪುರುಷ. ಪಾದರಾಯನಪುರದ ಸೋಂಕಿನ ಸಂಪರ್ಕ ಹೊಂದಿದ್ದಾರೆ.
ರೋಗಿ-450: ಬೆಂಗಳೂರಿನ 22 ವರ್ಷದ ಯುವಕ. ಪಾದರಾಯನಪುರದ ಸೋಂಕಿನ ಸಂಪರ್ಕ ಹೊಂದಿದ್ದಾರೆ.
ರೋಗಿ-451: ಚಿಕ್ಕಬಳ್ಳಾಪುರದ 39 ವರ್ಷದ ಪುರುಷ. ರೋಗಿ-250ರ ಸಂಪರ್ಕದಲ್ಲಿದ್ದರು.

ರೋಗಿ-452: ಬೆಂಗಳೂರಿನ 35 ವರ್ಷದ ಪುರುಷ. ಪಾದರಾಯನಪುರದ ಸೋಂಕಿನ ಸಂಪರ್ಕ ಹೊಂದಿದ್ದರು.
ರೋಗಿ-453: ಬೆಂಗಳೂರಿನ 32 ವರ್ಷದ ಪುರುಷ. ಪಾದರಾಯನಪುರದ ಸೋಂಕಿನ ಸಂಪರ್ಕ ಹೊಂದಿದ್ದರು.
ರೋಗಿ-454: ಬೆಂಗಳೂರಿನ 23 ವರ್ಷದ ಯುವಕ. ಪಾದರಾಯನಪುರದ ಸೋಂಕಿನ ಸಂಪರ್ಕ ಹೊಂದಿದ್ದರು.
ರೋಗಿ-455: ಬಾಗಲಕೋಟೆ ಜಿಲ್ಲೆ ಮುದೋಳದ 28 ವರ್ಷದ ಪುರುಷ. ರೋಗಿ-380ರ ಸಂಪರ್ಕದಲ್ಲಿದ್ದರು.
ರೋಗಿ-456: ಬಾಗಲಕೋಟೆ ಜಿಲ್ಲೆ ಜಮಕಂಡಿಯ 46 ವರ್ಷದ ಪುರುಷ. ಸಂಪರ್ಕದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
ರೋಗಿ-457: ವಿಜಯಪುರದ 17 ವರ್ಷದ ಯುವಕ. ರೋಗಿ-221ರ ಸಂಪರ್ಕ ಹೊಂದಿದ್ದರು.

ರೋಗಿ-458: ಬೆಂಗಳೂರಿನ 26 ವರ್ಷದ ಪುರುಷ. ರೋಗಿ-419ರ ಸಂಪರ್ಕದಲ್ಲಿದ್ದರು.
ರೋಗಿ-459: ಬೆಂಗಳೂರಿನ 35 ವರ್ಷದ ಪುರುಷ. ರೋಗಿ-419ರ ಸಂಪರ್ಕದಲ್ಲಿ ಇದ್ದರು.
ರೋಗಿ-460: ಬೆಂಗಳೂರಿನ 31 ವರ್ಷದ ಪುರುಷ. ರೋಗಿ-419ರ ಸಂಪರ್ಕದ ಹೊಂದಿದ್ದರು.
ರೋಗಿ-461: ಬೆಂಗಳೂರಿನ 32 ವರ್ಷದ ಪುರುಷ. ರೋಗಿ-419ರ ಸಂಪರ್ಕದಲ್ಲಿ ಇದ್ದರು.
ರೋಗಿ-462: ಬೆಂಗಳೂರಿನ 35 ವರ್ಷದ ಪುರುಷ. ರೋಗಿ-419ರ ಸಂಪರ್ಕದಲ್ಲಿದ್ದರು.
ರೋಗಿ-463: ಬೆಳಗಾವಿ ಜಿಲ್ಲೆ ರಾಯಬಾಗ್‍ನ 15 ವರ್ಷದ ಬಾಲಕ. ರೋಗಿ-148ರ ಸಂಪರ್ಕದಲ್ಲಿದ್ದರು.

ಬೆಂಗಳೂರಿನ 11, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ತಲಾ ಇಬ್ಬರಿಗೆ, ವಿಜಯಪುರದ, ತುಮಕೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ರಾಜ್ಯದ 453 ಸೋಂಕಿತರ ಪೈಕಿ ಈವರೆಗೂ 18 ಜನರು ಮೃತಪಟ್ಟಿದ್ದರೆ, 150 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Comments

Leave a Reply

Your email address will not be published. Required fields are marked *