ಪೊಲೀಸರು ಪ್ರಾಮಾಣಿಕರಾಗಿಲ್ಲ ಅಂದ್ರೆ ನಾಗರಿಕರು ನೆಮ್ಮದಿಯಾಗಿ ಇರಲು ಸಾಧ್ಯವಿಲ್ಲ: ಆರಗ ಜ್ಞಾನೇಂದ್ರ

araga jnanendra

ಶಿವಮೊಗ್ಗ: ಪೊಲೀಸರು ಪ್ರಾಮಾಣಿಕರಾಗಿಲ್ಲದಿದ್ದರೆ ನಾಗರಿಕರು ನೆಮ್ಮದಿಯಾಗಿ ಇರಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೊಲೀಸರು ಪ್ರಾಮಾಣಿಕರಿಲ್ಲದಿದ್ದರೇ ನಾಗರಿಕರು ನೆಮ್ಮದಿಯಾಗಿ ಇರಲು ಸಾಧ್ಯವಿಲ್ಲ. ಕಾನೂನು ಸುವ್ಯವಸ್ಥೆ ಸರಿ ದಾರಿಗೆ ತರುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡುತ್ತಿದೆ. ಬಿಜೆಪಿ ಪಕ್ಷಕ್ಕೆ ಒಂದು ಭವಿಷ್ಯ ಇದೆ. ಇವತ್ತು ಪಕ್ಷ ದೇಶವನ್ನು ಮುನ್ನಡೆಸುತ್ತಿದೆ. ಜಿಲ್ಲೆಯಲ್ಲಿ 38 ಕಲ್ಲು ಕ್ವಾರಿಗಳು ಅಧಿಕೃತವಾಗಿ ನಡೆಯುತ್ತಿವೆ. ಎಲ್ಲೋ ಅಲ್ಲೊಂದು ಇಲ್ಲೊಂದು ಅನಧಿಕೃತವಾಗಿ ನಡೆಯುತ್ತಿವೆ. ಪೊಲೀಸರು ಅಂತಹವರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ಅವರು ಅದು ಮುಖ್ಯಮಂತ್ರಿ ಅವರ ವಿವೇಚನೆ ಬಿಟ್ಟ ವಿಚಾರ. ಈ ಬಗ್ಗೆ ಮುಖ್ಯಮಂತ್ರಿ ಅವರು ಗಮನ ಹರಿಸುತ್ತಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮೊದ್ಲು ಜನ್ರಿಗೆ ಆದಾಯ ಬರುವಂತೆ ಮಾಡಿ, ಆಮೇಲೆ ದರ ಏರಿಕೆ ಮಾಡಿ : ಡಿಕೆಶಿ

ಮೇಕೆದಾಟು ಪಾದಯಾತ್ರೆಯಲ್ಲಿ ಕರ್ತವ್ಯ ನಿರ್ವಹಿಸಿದ ಶೇ.60 ರಷ್ಟು ಪೊಲೀಸರು ಮತ್ತು ಅವರ ಕುಟುಂಬದವರು ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ. ರಾಮನಗರ, ಹಾಸನ, ಮಂಡ್ಯ ಈ ಭಾಗದಲ್ಲಿ ಕೋವಿಡ್ ಹೆಚ್ಚಾಗಿದೆ. ಈ ಜಿಲ್ಲೆಗಳಲ್ಲಿ ಕೋವಿಡ್ ಹೆಚ್ಚಾಗಲು ಮೇಕೆದಾಟು ಪಾದಯಾತ್ರೆಯೂ ಒಂದು ಕಾರಣ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಕೋವಿಡ್‌ ಯಾರನ್ನೂ ಬಿಟ್ಟಿಲ್ಲ, ದೇವೇಗೌಡರಿಗೆ ಕೊರೊನಾ ತೀವ್ರತೆ ಇಲ್ಲ: ಬೊಮ್ಮಾಯಿ

Comments

Leave a Reply

Your email address will not be published. Required fields are marked *