ಜಮೀರ್ ನಡೆಯಿಂದ ಕಾಂಗ್ರೆಸ್ ತಲೆತಗ್ಗಿಸುವ ಕೆಲಸ: ಆರಗ ಜ್ಞಾನೇಂದ್ರ

araga jnanendra

ಬೆಂಗಳೂರು: ಜಮೀರ್ ಅಹ್ಮದ್ ಅವರ ನಡೆಯಿಂದ ಕಾಂಗ್ರೆಸ್ ಪಕ್ಷ ನಾಚಿಕೆಯಿಂದ ತಲೆತಗ್ಗಿಸುವ ಕೆಲಸವಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಟೀಕಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮೀರ್ ಅಹ್ಮದ್ ಅವರು ಹಿಂಸಾತ್ಮಕ ಕೆಲಸ ಮಾಡಿದವರಿಗೆ ಪ್ರೋತ್ಸಾಹ ಕೊಡುವ ಕೆಲಸ ಮಾಡುತ್ತಿದ್ದರು. ಜಮೀರ್ ಡಿಜೆಹಳ್ಳಿ ಪ್ರಕರಣದಲ್ಲೂ ಹೀಗೆ ಮಾಡಿದ್ದರು. ಈಗ ಹಬ್ಬಳ್ಳಿಯ ಘಟನೆಯಲ್ಲೂ ಹೀಗೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಜಮೀರ್‌ಗೆ ಶಾಂತಿ ನೆಮ್ಮದಿ ಅಗತ್ಯವಿಲ್ಲ. ಅದಕ್ಕಾಗಿ ಪುಂಡರಿಗೆ ನೆರವನ್ನು ನೀಡುತ್ತಿದ್ದಾರೆ. ಜಮೀರ್ ನಡೆಯಿಂದ ಕಾಂಗ್ರೆಸ್ ಪಕ್ಷ ನಾಚಿಕೆಯಿಂದ ತಲೆತಗ್ಗಿಸುವ ಕೆಲಸ ಅಪರಾಧಿಗಳನ್ನು ಬೆಂಬಲಿಸಿ ಹೀರೋಗಳನ್ನಾಗಿ ಮಾಡುವ ಕೆಲಸ ಮಾಡುತ್ತಿದ್ದಾರೆ. ಇದನ್ನ ಜನ ನೋಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಮತ್ತೆ ಗಲಭೆಕೋರರ ಪರ ನಿಂತ ಜಮೀರ್- ಕಲ್ಲು ಹೊಡೆದವರ ಕುಟುಂಬಕ್ಕೆ 5 ಸಾವಿರ, ಫುಡ್‍ಕಿಟ್

ಹುಬ್ಬಳ್ಳಿಯಲ್ಲಿ ಕಲ್ಲು ಹೊಡೆದು ಅರೆಸ್ಟ್ ಆದವರ ಪರ ಜಮೀರ್ ನಿಂತಿದ್ದು, ಗಲಭೆಕೋರರಿಗೆ ಜಮೀರ್ 5 ಸಾವಿರ ನಗದು ಹಾಗೂ ರಂಜಾನ್ ಫುಡ್‍ಕಿಟ್ ನೀಡಿದ್ದಾರೆ. ಬಂಧನಕ್ಕೊಳಗಾದ ಕಿಡಿಗೇಡಿಗಳ ಕುಟುಂಬಗಳಿಗೆ ಜಮೀರ್ ಸಹಾಯ ಮಾಡಿದ್ದಾರೆ. ರಂಜಾನ್ ಹಿನ್ನೆಲೆ ಮೆಕ್ಕಾದಲ್ಲಿರುವ ಜಮೀರ್ ಅಹ್ಮದ್, ಅಲ್ಲಿಂದಲೇ ಗಲಭೆಕೋರರಿಗೆ ಸಹಾಯಹಸ್ತ ಚಾಚಿದ್ದಾರೆ. ಹುಬ್ಬಳ್ಳಿಯ ತಮ್ಮ ಬೆಂಬಲಿಗರ ಮೂಲಕ ರೇಶನ್ ಕಿಟ್ ಹಂಚಿಕೆ ಮಾಡಲಿದ್ದಾರೆ. ಇದಕ್ಕೆ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

Comments

Leave a Reply

Your email address will not be published. Required fields are marked *