ಕಾಂಗ್ರೆಸ್ ಅವಧಿಯಲ್ಲಿ ನಡೆದ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಕ್ರಮ: ಆರಗ ಜ್ಞಾನೇಂದ್ರ

ಶಿವಮೊಗ್ಗ: ಕಾಂಗ್ರೆಸ್ ಅವಧಿಯಲ್ಲಿ ನಡೆದ ಪರೀಕ್ಷೆಗಳಲ್ಲಿ ಹಲವು ಹಗರಣಗಳು ನಡೆದಿವೆ. ಆದರೆ, ಕಾಂಗ್ರೆಸ್‍ನವರು ಅದನ್ನೆಲ್ಲಾ ಮರೆತಿದ್ದಾರೆ. ಆದರೆ ನಾವು ಆ ರೀತಿ ಮಾಡದೇ ಹಗರಣ ನಡೆದಿರುವುದು ಹೊರಗೆ ಬರುತ್ತಿದ್ದಂತೆ ತನಿಖೆಗೆ ವಹಿಸಿದ್ದೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಕಾಲದಲ್ಲಿ ಇಂತಹ ಹಲವು ಪರೀಕ್ಷೆಗಳು ವಿಫಲವಾಗಿವೆ. ಅವರು ಮೊದಲು ತಮ್ಮ ವೈಫಲ್ಯತೆಗಳನ್ನು ಹೇಳಿಕೊಳ್ಳಲಿ ಎಂದು ತಿರುಗೇಟು ನೀಡಿದರು. ಪಿಎಸ್‍ಐ ಹಗರಣದ ತನಿಖೆ ನಡೆಯುತ್ತಿದೆ. ತನಿಖೆಗೆ ಸಿಐಡಿಯ ಪ್ರತ್ಯೇಕ ತಂಡವನ್ನು ನೇಮಕ ಮಾಡಲಾಗಿದೆ ಎಂದು ಸಮರ್ಥಿಸಿಕೊಂಡರು.

ಪಾರದರ್ಶಕವಾಗಿ ಪ್ರಕರಣದ ತನಿಖೆ ನಡೆಯುತ್ತಿದೆ. ಪ್ರಾಮಾಣಿಕ ಬಡವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದು ಎಂಬ ದೃಷ್ಟಿಯಿಂದ ಮರು ಪರೀಕ್ಷೆಗೆ ಸೂಚಿಸಿದ್ದೇವೆ. ಆದರೆ ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ಪರೀಕ್ಷೆ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದರು. ಇದನ್ನೂ ಓದಿ: ನಿನ್ನ ಹೆಸರು ಮೊಹಮ್ಮದ್? – ಬಿಜೆಪಿ ಮಾಜಿ ಕಾರ್ಪೊರೇಟರ್ ಪತಿಯಿಂದ ಹಲ್ಲೆಗೊಳಗಾದ ವೃದ್ಧ ಸಾವು

ಪ್ರಿಯಾಂಕ್ ಖರ್ಗೆಗೆ ನೋಟಿಸ್ ನೀಡಿ ವಿಚಾರಣೆ ನಡೆಸುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಪ್ರಿಯಾಂಕ್ ಖರ್ಗೆ ಪದೇಪದೆ ನನ್ನ ಹತ್ತಿರ ಸಾಕ್ಷ್ಯಾಧಾರಗಳಿವೆ ಎಂದು ಹೇಳುತ್ತಿರುತ್ತಾರೆ. ಅಧಿಕಾರಿಗಳ ಬಳಿ ಹಾಜರಾಗಿ ತಮ್ಮ ಬಳಿ ಇರುವ ಸಾಕ್ಷ್ಯಾಧಾರಗಳನ್ನು ನೀಡಿ ಎಂದರೆ, ಬೆನ್ನು ತೋರಿಸುತ್ತಾರೆ. ಅವರ ದೃಷ್ಟಿಯಲ್ಲಿ ಪ್ರಾಮಾಣಿಕ ತನಿಖೆ ನಡೆಯಬಾರದು. ತನಿಖೆಯ ದಾರಿ ತಪ್ಪಿಸುವುದೇ ಖರ್ಗೆಯವರ ಉದ್ದೇಶವಾಗಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಹಿಂದೆ ನಮ್ಮ ನಡುವೆ ಏನೇ ಆಗಿರಬಹುದು, ಆದರೀಗ ಒಂದಾಗಿದ್ದೇವೆ: ಲಕ್ಷ್ಮಣ ಸವದಿ

Comments

Leave a Reply

Your email address will not be published. Required fields are marked *