ಹುಚ್ಚು ಹಿಡಿದವರು ಮಾತ್ರ ಕಾಂಗ್ರೆಸ್‍ಗೆ ಹೋಗುತ್ತಾರೆ: ಆರಗ ಜ್ಞಾನೇಂದ್ರ

Araga Jnanendra

ತುಮಕೂರು: ಹುಚ್ಚು ಹಿಡಿದವರು ಮಾತ್ರ ಕಾಂಗ್ರೆಸ್‍ಗೆ ಹೋಗುತ್ತಾರೆ. ಬುದ್ಧಿ ನೆಟ್ಟಗೆ ಇರುವವರು ಯಾರೂ ಹೋಗುವುದಿಲ್ಲ ಎಂದು ಗೃಹ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ನರೇಂದ್ರ ಮೋದಿ ಆಡಳಿತ, ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಪಕ್ಷ ಸದೃಢವಾಗಿದೆ. ಇಂತಹ ಸಮಯದಲ್ಲಿ ಯಾರೂ ಪಕ್ಷ ಬಿಟ್ಟು ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಆರೋಗ್ಯ ಸೂಚ್ಯಂಕದಲ್ಲಿ ರಾಜ್ಯವನ್ನು ಮುಂಚೂಣಿಗೆ ತರಲು ಅಗತ್ಯ ಕ್ರಮ: ಡಾ.ಕೆ.ಸುಧಾಕರ್

bjp - congress

ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ವೇತನ ಪರಿಷ್ಕರಣೆ ಸಂಬಂಧ ಔರಾದಕರ್ ವರದಿ ಜಾರಿ ಮಾಡಲಾಗಿದೆ. ಇದರಿಂದ ಕೆಲವರಿಗೆ ಸರಿಯಾದ ಪ್ರಮಾಣದಲ್ಲಿ ವೇತನ ಹೆಚ್ಚಳವಾಗಿಲ್ಲ ಎಂಬ ಅಸಮಾಧಾನ ಇದೆ. ಈ ಬಗ್ಗೆ ಆರ್ಥಿಕ ಇಲಾಖೆ ಜೊತೆ ಚರ್ಚಿಸಿದ್ದು, ಹೆಚ್ಚುವರಿಯಾಗಿ ಭತ್ಯೆ ನೀಡುವ ಮೂಲಕ ವ್ಯತ್ಯಾಸವನ್ನು ಸರಿಪಡಿಸಲಾಗಿದೆ. ರಾಜ್ಯದಲ್ಲಿ 200 ಕೋಟಿ ವೆಚ್ಚದಲ್ಲಿ 100 ಹೊಸ ಪೊಲೀಸ್ ಠಾಣೆಗಳನ್ನು ನಿರ್ಮಿಸಲಾಗುತ್ತಿದೆ. ಪೊಲೀಸರಿಗೆ ಸುಸಜ್ಜಿತವಾದ ಮನೆ, ಠಾಣೆ ನಿರ್ಮಿಸಿ ಕೊಡಲಾಗುತ್ತಿದೆ ಎಂದರು. ಇದನ್ನೂ ಓದಿ: ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ

ನಗರದ ಹೊರ ವಲಯದ ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯ ಚಿಕ್ಕಹಳ್ಳಿಯಲ್ಲಿ ಮಹಿಳೆ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣದ ಬಗ್ಗೆ ಈವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ. ಸಾಕ್ಷಾಧಾರಗಳು ಸಿಗದೆ ಆರೋಪಿಗಳನ್ನು ಬಂಧಿಸಲು ಪೊಲೀಸರಿಗೆ ಸಾಧ್ಯವಾಗಿಲ್ಲ ಎಂದು ಹೇಳಿದರು

Comments

Leave a Reply

Your email address will not be published. Required fields are marked *