ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನಾ ವಾಹನದ ಮೇಲೆ ಉಗ್ರರ ದಾಳಿ – 2 ದಿನಗಳಲ್ಲಿ 2ನೇ ಅಟ್ಯಾಕ್‌!

– ಇಬ್ಬರು ಯೋಧರಿಗೆ ಗಾಯ, ಉಗ್ರರಿಗಾಗಿ ಶೋಧ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ (Jammu Kashmir) ಉಗ್ರರು ಮತ್ತೆ ಅಟ್ಟಹಾಸ ಮುಂದುವರಿಸಿದ್ದಾರೆ. ಕಥುವಾ ಜಿಲ್ಲೆಯಲ್ಲಿ ಭಾರತೀಯ ಸೇನೆಯ ಬೆಂಗಾವಲು ವಾಹನದ ಮೇಲೆ ಉಗ್ರರು ದಾಳಿ (Terrorists Attack) ನಡೆಸಿದ್ದಾರೆ.

ಕತುವಾ ಜಿಲ್ಲೆಯ ಮಚೇಡಿ ಪ್ರದೇಶದ ಜೆಂಡಾ ನಲ್ಲಾ ಗ್ರಾಮದ ಬಳಿ ಸೋಮವಾರ (ಜು.8) ಮಧ್ಯಾಹ್ನ 3.30ರ ಸುಮಾರಿಗೆ ಸೇನಾ ವಾಹನವನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರ ದಾಳಿಯಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಕಳೆದ 2 ದಿನಗಳಲ್ಲಿ ಇದು ಸೇನೆಯ ಮೇಲೆ ನಡೆದ 2ನೇ ದಾಳಿಯಾಗಿದೆ. ಜೊತೆಗೆ ಒಂದು ವಾರದಲ್ಲಿ ಸೇನಾ ವಾಹನವನ್ನೇ ಗುರಿಯಾಗಿಸಿ ನಡೆಸಿದ 2ನೇ ದಾಳಿಯೂ ಆಗಿದೆ. ಇತ್ತೀಚೆಗೆ ಇಲ್ಲಿನ ಕುಲ್ಗಾಮ್‌ ಜಿಲ್ಲೆಯಲ್ಲಿ ನಡೆದ 2 ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 6 ಭಯೋತ್ಪಾದಕರು ಮೃತಪಟ್ಟಿದ್ದರು. ಇದನ್ನೂ ಓದಿ: NEET-UG ಮರು ಪರೀಕ್ಷೆ ನಮ್ಮ ಕೊನೆಯ ಆಯ್ಕೆ, ಪೇಪರ್‌ ಸೋರಿಕೆ ಬಗ್ಗೆ ತನಿಖೆ ನಡೆಸಬೇಕು: ಸುಪ್ರೀಂ

ಸೇನೆಯ ವಾಹನ ತೆರಳುವ ಕುರಿತು ಮಾಹಿತಿ ಪಡೆದಿದ್ದ ಉಗ್ರರು, ಯೋಜನೆ ರೂಪಿಸಿ, ದಾಳಿ ಮಾಡಿದ್ದಾರೆ ಎನ್ನಲಾಗಿದೆ. ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ನಂತರ, ಸೈನಿಕರೂ ಪ್ರತಿದಾಳಿ ನಡೆಸಿದ್ದಾರೆ. ಇದನ್ನೂ ಓದಿ: 1.92 ಲಕ್ಷ ಮೌಲ್ಯದ ಸೀರೆಯುಟ್ಟು ಮಿಂಚಿದ ಗರ್ಭಿಣಿ ದೀಪಿಕಾ ಪಡುಕೋಣೆ

ಸದ್ಯ ಸೇನಾ ವಾಹನವನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸುತ್ತಲೇ ಭಾರತೀಯ ಸೇನೆಯ ಯೋಧರು ತಿರುಗೇಟು ನೀಡುತ್ತಿದ್ದಾರೆ. ಅರಣ್ಯ ಪ್ರದೇಶದಲ್ಲಿ ಸುಮಾರು 2-3 ಉಗ್ರರು ಅಡಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಉಗ್ರರಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ. ಇದನ್ನೂ ಓದಿ: ಅಸ್ಸಾಂನಲ್ಲಿ ಭೀಕರ ಪ್ರವಾಹ – ಕಾಜಿರಂಗ ಪಾರ್ಕ್‍ನಲ್ಲಿ 131 ವನ್ಯಜೀವಿಗಳು ಸಾವು