ಬಿಜೆಪಿಯಿಂದ ‘ಅರೆಸ್ಟ್ ಮಿ ಕುಮಾರಸ್ವಾಮಿ’ ಆಂದೋಲನ

ಮಡಿಕೇರಿ: ಟಿಪ್ಪು ಜಯಂತಿ ಹತ್ತಿರ ಬರುತ್ತಿದ್ದಂತೆ ಕೊಡಗು ಜಿಲ್ಲೆಯಲ್ಲಿ ಸೂಕ್ಷ್ಮ ವಾತಾವರಣ ಸೃಷ್ಟಿಯಾಗಿದ್ದು, ಸರ್ಕಾರದ ವಿರುದ್ಧ ಬಿಜೆಪಿ ಅರೆಸ್ಟ್ ಮಿ ಕುಮಾರಸ್ವಾಮಿ ಆಂದೋಲನ ಶುರು ಮಾಡಿದೆ.

ಇನ್ನೂ ಧರ್ಮ ವಿರೋಧಿ ಟಿಪ್ಪು ಜಯಂತಿ ಮಾಡಿದ್ರೆ ಕೊಡಗು ಬಂದ್ ಮಾಡಲಾಗುವುದು ಎಂದು ಟಿಪ್ಪು ಜಯಂತಿ ವಿರೋಧಿ ಸಂಘಟನೆ ಹಾಗೂ ಬಿಜೆಪಿ ನಿರ್ಧರಿಸಿದೆ.

ಜಿಲ್ಲೆಯ ಗಡಿಯಲ್ಲಿ ಕಟ್ಟೆಚ್ಚರ ವಹಿಸುವುದರೊಂದಿಗೆ ಪೊಲೀಸ್ ಇಲಾಖೆ ವ್ಯಾಪಕ ಬಂದೋಬಸ್ತ್ ಮಾಡಲಾಗಿದೆ. ಟಿಪ್ಪು ಆಚರಣೆ ವೇಳೆ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಇಂದು ಸಂಜೆ 6 ಗಂಟೆಯಿಂದ ಭಾನುವಾರ ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಹೊರಡಿಸಲಾಗಿದೆ, ಇನ್ನೂ ಮುಂಜಾಗ್ರತಾ ಕ್ರಮವಾಗಿ ಕೊಡಗು ಗಡಿಭಾಗಗಳಲ್ಲಿ 10, ಜಿಲ್ಲೆಯಲ್ಲಿ 40 ಚೆಕ್ ಪೋಸ್ಟ್‍ಗಳನ್ನು ನಿಯೋಜಿಸಲಾಗಿದ್ದೂ ಈಗಾಗಲೇ ಕಾರ್ಯನಿರ್ವಹಿಸುತ್ತಿವೆ.

ಗಡಿಭಾಗದ 10 ಚೆಕ್ ಪೋಸ್ಟ್ ಗಳಲ್ಲಿ 40 ಸಿಸಿಟಿವಿ ಸೇರಿದಂತೆ ಜಿಲ್ಲೆಯ ಆಯಕಟ್ಟಿನ ಸ್ಥಳಗಳಲ್ಲಿ 200 ಸಿಸಿಟಿವಿಗಳನ್ನು ಅಳವಡಿಸಲಾಗಿದೆ. 10 ಕೆಎಸ್‍ಆರ್‍ಪಿ, 21 ಡಿಎಆರ್ ತುಕಡಿ ಸೇರಿದಂತೆ 1500 ರಿಂದ 2000 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಯಾರಾದರೂ ಶಾಂತಿ ಕದಡುವ ಕೆಲಸಕ್ಕೆ ಮುಂದಾದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಕೊಡಗು ಎಸ್ಪಿ ಸುಮನ್ ಡಿ ಪನ್ನೇಕರ್ ತಿಳಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Comments

Leave a Reply

Your email address will not be published. Required fields are marked *