ಯಾದಗಿರಿ: ಹೆಂಡತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯನ್ನು ನದಿಯಲ್ಲಿ ಮುಳುಗಿಸಿ ಮಗನೇ ಕೊಲೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಪೂರ ತಾಲೂಕಿನ ಶಿರವಾಳದ ಬಳಿಯ ಭೀಮಾ ನದಿಯಲ್ಲಿ ನಡೆದಿದೆ.

ರಾಚಮ್ಮ ಮೃತ ದುರ್ದೈವಿ. ಆರೋಪಿಯನ್ನು ನಾಗಣ್ಣ ಎಂದು ಗುರುತಿಸಲಾಗಿದ್ದು, ಈತ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಬಿಳವಾರ ಗ್ರಾಮದವನಾಗಿದ್ದಾನೆ. ತನ್ನ ತಾಯಿ ಹೆಂಡತಿಯೊಂದಿಗೆ ಸದಾ ಜಗಳವಾಡುತ್ತಾಳೆ ಎಂಬ ಕಾರಣಕ್ಕೆ ನಾಗಣ್ಣ ತನ್ನ ಸ್ನೇಹಿತನೊಂದಿಗೆ ಸೇರಿ ತಾಯಿಯನ್ನು ನದಿಗೆ ತಳ್ಳಿ ಹತ್ಯೆಗೈದಿದ್ದಾನೆ. ಇದನ್ನೂ ಓದಿ: ಕೇಜ್ರಿವಾಲ್ ತಪ್ಪಿಸಿಕೊಳ್ಳಲು ಇರುವ ಒಂದೇ ಮಾರ್ಗ ಬಲಿಪಶು: ಗಂಭೀರ್

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭೀಮರಾಯನ ಗುಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ನಾಗಣ್ಣ ಹಾಗೂ ಆತನ ಸ್ನೇಹಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದೀಗ ಪೊಲೀಸರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ ರಾಜ್ಯ ಕಾಂಗ್ರೆಸ್‍ನ ಪವರ್ ಪಾಯಿಂಟ್‍ಗಳಲ್ಲ: ಎಂ.ಬಿ.ಪಾಟೀಲ್

Leave a Reply