ನಾನು ಹಿಂದೂ ದೇವಸ್ಥಾನಕ್ಕೆ ಭೇಟಿ ನೀಡುತ್ತೇನೆ: ಅರವಿಂದ್ ಕೇಜ್ರಿವಾಲ್

ನವದೆಹಲಿ: ನಾನು ಹಿಂದೂ, ಹೀಗಾಗಿ ನಾನು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದು, ಇದಕ್ಕೆ ಯಾರೂ ಆಕ್ಷೇಪ ವ್ಯಕ್ತಪಡಿಸಬಾರದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಕೇಜ್ರಿವಾಲ್ ದೇವಸ್ಥಾನಗಳಿಗೆ ಭೇಟಿ ನೀಡುವ ಮೂಲಕ ಮೃದು ಹಿಂದುತ್ವ ದಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆಯೇ ಎಂಬ ಪ್ರಶ್ನೆಗೆ ಈ ರೀತಿ ಉತ್ತರಿಸಿದ್ದಾರೆ. ನೀವು ದೇವಸ್ಥಾನಕ್ಕೆ ಹೋಗುತ್ತೀರಾ? ನಾನು ಕೂಡ ದೇವಸ್ಥಾನಕ್ಕೆ ಹೋಗುತ್ತೇನೆ. ದೇವಸ್ಥಾನಕ್ಕೆ ಹೋಗುವುದರಲ್ಲಿ ತಪ್ಪೇನಿಲ್ಲ, ನೀವು ಅದನ್ನು ಭೇಟಿ ಮಾಡಿದಾಗ ನಿಮಗೆ ಶಾಂತಿ ಸಿಗುತ್ತದೆ. ಅವರ (ಮೃದು ಹಿಂದುತ್ವದ ಆರೋಪ ಮಾಡುವವರು) ಆಕ್ಷೇಪಣೆ ಏನು? ಏಕೆ ವಿರೋಧ ವ್ಯಕ್ತಪಡಿಸಬೇಕು? ನಾನು ಹಿಂದೂ ಎಂಬ ಕಾರಣಕ್ಕೆ ನಾನು ದೇವಸ್ಥಾನಕ್ಕೆ ಹೋಗುತ್ತಿದ್ದೇನೆ, ನನ್ನ ಪತ್ನಿ ಗೌರಿಶಂಕರ ದೇವಸ್ಥಾನಕ್ಕೆ ಭೇಟಿ ನೀಡುತ್ತಾಳೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಇದನ್ನೂ ಓದಿ: ಜಿಮ್ ಮಾಡೋವ್ರಿಗೆ ಅಪ್ಪು ಸಾವು ಬಿಗ್ ಶಾಕ್ – ಜಿಮ್‍ಗೆ ಹೋಗದಂತೆ ಮಕ್ಕಳಿಗೆ ಪೋಷಕರ ಆಕ್ಷೇಪ

ಪ್ರಮೋದ್ ಸಾವಂತ್ ನಮ್ಮ ಸರ್ಕಾರವನ್ನು ನಕಲು ಮಾಡುತ್ತಿದ್ದಾರೆ. ನಾವು ವಿದ್ಯುತ್ ಉಚಿತ ನೀಡುತ್ತೇವೆ ಎಂದು ನಾನು ಹೇಳಿದಾಗ ಅವರು ನೀರು ಉಚಿತವಾಗಿ ನೀಡಿದರು. ನಾವು ಉದ್ಯೋಗ ಭತ್ಯೆ ನೀಡುತ್ತೇವೆ ಎಂದು ಹೇಳಿದಾಗ ಅವರು ಸುಮಾರು 10,000 ಉದ್ಯೋಗಗಳನ್ನು ಘೋಷಿಸಿದರು. ನಾನು ತೀರ್ಥಯಾತ್ರೆಗಳ ಬಗ್ಗೆ ಮಾತನಾಡುವಾಗ ಅವರು ತಮ್ಮ ಯೋಜನೆ ಘೋಷಣೆ ಮಾಡಿದರು ಎಂದು ಕೇಜ್ರಿವಾಲ್ ಹೇಳಿದ್ದಾರೆ. ಇದನ್ನೂ ಓದಿ:  ಕೇರಳದಲ್ಲಿ120 ವರ್ಷಗಳಲ್ಲಿಯೇ ಅತ್ಯಧಿಕ ಮಳೆ

Comments

Leave a Reply

Your email address will not be published. Required fields are marked *