‘ಅಪ್ಪು’ ಸಿನಿಮಾ ವೀಕ್ಷಿಸಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌

ಪುನೀತ್ ರಾಜ್‌ಕುಮಾರ್ (Puneeth Rajkumar) 50ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ‘ಅಪ್ಪು’ (Appu) ಸಿನಿಮಾ ರೀ-ರಿಲೀಸ್ ಆಗಿದೆ. ಈ ಹಿನ್ನೆಲೆ ಬೆಂಗಳೂರಿನ ನರ್ತಕಿ ಥಿಯೇಟರ್‌ನಲ್ಲಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್ (Ashwini Rajkumar) ‘ಅಪ್ಪು’ ಸಿನಿಮಾ ವೀಕ್ಷಿಸಿದ್ದಾರೆ. ಇದನ್ನೂ ಓದಿ:ಅಂಬಿ ಮೊಮ್ಮಗನ ನಾಮಕರಣ ಸಂಭ್ರಮ: ಕಿಚ್ಚ ಸುದೀಪ್‌ ಭಾಗಿ

ಮಕ್ಕಳಾದ ಧೃತಿ ಮತ್ತು ವಂದಿತಾ ಜೊತೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ‘ಅಪ್ಪು’ ಸಿನಿಮಾ ನೋಡಲು ಬಂದಿದ್ದಾರೆ. ಈ ವೇಳೆ, ಅವರನ್ನು ‌ ಅಪ್ಪು ಫ್ಯಾನ್ಸ್ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಇದನ್ನೂ ಓದಿ:ಶ್ರೀಕೃಷ್ಣ ದೇಗುಲಕ್ಕೆ ಭೇಟಿ ನೀಡಿದ ಪ್ರೇಮ್‌, ಶರಣ್ಯ ಶೆಟ್ಟಿ

23 ವರ್ಷಗಳ ಹಿಂದೆ ಬಿಡುಗಡೆಯಾಗಿದ್ದ ‘ಅಪ್ಪು’ ಸಿನಿಮಾಗೆ ಮತ್ತೆ ಅದೇ ಕ್ರೇಜ್ ಇರೋದು ನೋಡಿ ಅಶ್ವಿನಿ ಖುಷಿಪಟ್ಟಿದ್ದಾರೆ. ಬೆಳ್ಳಿಪರದೆಯ ಮೇಲೆ ಪುನೀತ್‌ ಅವರನ್ನು ನೋಡ್ತಿದ್ದಂತೆ ಅಶ್ವಿನಿ ಮತ್ತು ಮಕ್ಕಳಾದ ಧೃತಿ, ವಂದಿತಾ ಭಾವುಕರಾಗಿದ್ದಾರೆ. ಬಳಿಕ 10 ನಿಮಿಷಗಳ ಕಾಲ ಸಿನಿಮಾ ನೋಡಿ ತೆರಳಿದ್ದಾರೆ.

ಇನ್ನೂ ಇಂದು ವೀರೇಶ್‌ ಚಿತ್ರಮಂದಿರದಲ್ಲಿ ವಿನಯ್‌ ರಾಜ್‌ಕುಮಾರ್‌, ಶರ್ಮಿಳಾ ಮಾಂಡ್ರೆ ಜೊತೆ ರಮ್ಯಾ ಅವರು ‘ಅಪ್ಪು’ ಸಿನಿಮಾ ವೀಕ್ಷಿಸಿದ್ದಾರೆ.

ಇನ್ನೂ ಪುರಿ ಜಗನ್ನಾಥ್ ನಿರ್ದೇಶನದ ‘ಅಪ್ಪು’ ಸಿನಿಮಾದಲ್ಲಿ ಪುನೀತ್‌ಗೆ ನಾಯಕಿಯಾಗಿ ರಕ್ಷಿತಾ ನಟಿಸಿದ್ದರು. ಪಾರ್ವತಮ್ಮ ರಾಜ್‌ಕುಮಾರ್ ನಿರ್ಮಾಣ ಮಾಡಿದ್ದರು. 2002ರಲ್ಲಿ ಈ ಸಿನಿಮಾದ ಮೂಲಕ ಪುನೀತ್ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು.