ಡೆಪ್ಯೂಟಿ ಸ್ಪೀಕರ್ ಆನಂದ ಮಾಮನಿ ವಿಧಿವಶ

ಬೆಳಗಾವಿ: ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಆನಂದ ಮಾಮನಿ (Aanand Mamani) (56) ವಿಧಿವಶರಾಗಿದ್ದಾರೆ.

ಮಧ್ಯರಾತ್ರಿ 12.02ಕ್ಕೆ ಮಣಿಪಾಲ್ ಆಸ್ಪತ್ರೆ (manipal Hospital) ಯಲ್ಲಿ ಕೊನೆಯುಸಿರುಳೆದಿದ್ದಾರೆ. ಲಿವರ್ ಕ್ಯಾನ್ಸರ್, ಜಾಂಡೀಸ್‍ನಿಂದ ಬಳಲುತ್ತಿದ್ದ ಮಾಮನಿಯವರು ಚೆನ್ನೈನಲ್ಲಿ ಚಿಕಿತ್ಸೆ ಪಡೆದು ಬೆಂಗಳೂರಿಗೆ ಶಿಫ್ಟ್ ಆಗಿದ್ದರು.

ಜೆಡಿಎಸ್ (JDS) ಮೂಲಕ ರಾಜಕೀಯ ಪ್ರವೇಶಿಸಿ 2008ರಲ್ಲಿ ಬಿಜೆಪಿ (BJP) ಸೇರ್ಪಡೆಯಾಗಿದ್ದರು. 2008ರಿಂದ ಸತತವಾಗಿ 3 ಬಾರಿ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದು, ಹ್ಯಾಟ್ರಿಕ್ ಗೆಲುವಿನ ಮೂಲಕ ಸವದತ್ತಿ ಕ್ಷೇತ್ರದಲ್ಲಿ ಇತಿಹಾಸ ಸೃಷ್ಠಿಸಿದ್ದರು. 2020ರ ಮಾರ್ಚ್‍ನಲ್ಲಿ ಡೆಪ್ಯೂಟಿ ಸ್ಪೀಕರ್ ಆಗಿ ಆಯ್ಕೆಯಾಗಿದ್ದರು. ಇವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಇತ್ತ ಮಾಮನಿ ನಿಧನದ ಸುದ್ದಿ ಕೇಳುತ್ತಿದ್ದಂತೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ರಾತ್ರೋರಾತ್ರಿ ಅಂತಿಮ ದರ್ಶನ ಪಡೆದಿದ್ದಾರೆ. ಮಣಿಪಾಲ್ ಆಸ್ಪತ್ರೆಗೆ ಆಗಮಿಸಿ ಸ್ನೇಹಿತನ ಅಂತಿಮ ದರ್ಶನ ಪಡೆದರು.ಮಾಮನಿ ಪಾರ್ಥಿವ ಶರೀರ ಕಂಡು ಸಿಎಂ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಇದನ್ನೂ ಓದಿ: ಸಾರ್ವಜನಿಕರ ಕೈಗೆ ತಗ್ಲಾಕೊಂಡ ಮೊಬೈಲ್ ಕಳ್ಳ – ಗೂಸಾ ಕೊಟ್ಟು ಪೊಲೀಸರಿಗೆ ಒಪ್ಪಿಸಿದ್ರು

ಬಳಿಕ ಮಾತನಾಡಿದ ಅವರು, ಚಿಕ್ಕ ವಯಸ್ಸಲ್ಲೇ ರಾಜಕೀಯಕ್ಕೆ ಬಂದ್ರು. ನನ್ನೊಂದಿಗೆ ಬಿಜೆಪಿ ಸೇರಿದ್ರು. ಸವದತ್ತಿಯಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಸಂಜೆ 4 ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಯುತ್ತದೆ ಎಂದರು.

ಮಾಮನಿ ನಿಧನಕ್ಕೆ ರಾಜಕೀಯ ನಾಯಕರು ಕಂಬನಿ ಮಿಡಿದಿದ್ದಾರೆ.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *