ಮತಾಂತರ ತಡೆಗೆ ಉತ್ತರ ಪ್ರದೇಶದ ರೀತಿ ರಾಜ್ಯದಲ್ಲೂ ಕಾನೂನು ತನ್ನಿ: ಬೋಪಯ್ಯ

ಮಡಿಕೇರಿ: ಮತಾಂತರ ತಡೆಗೆ ಉತ್ತರ ಪ್ರದೇಶದ ರೀತಿಯಲ್ಲಿ ರಾಜ್ಯದಲ್ಲೂ ಕಾನೂನು ತರಬೇಕಿದೆ ಎಂದು ಶಾಸಕ ಕೆ.ಜಿ.ಬೋಪಯ್ಯ ವಿಧಾನಸಭೆಯಲ್ಲಿಂದು ಒತ್ತಾಯಿಸಿದರು.

ಕಲಾಪದ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ಗೂಳಿಹಟ್ಟಿ ಶೇಖರ್, ಚಿತ್ರದುರ್ಗದಲ್ಲಿ 20 ಸಾವಿರಕ್ಕೂ ಹೆಚ್ಚು ಜನ ಮತಾಂತರವಾಗಿದ್ದಾರೆ. ನನ್ನ ಹೆತ್ತ ತಾಯಿಯನ್ನೂ ಮತಾಂತರ ಮಾಡಿದ್ದಾರೆ ಎಂದು ಹೇಳಿದರು. ಇದೇ ವೇಳೆ ಮಾತನಾಡಿದ ಬೋಪಯ್ಯ, ಎಲ್ಲ ಕಡೆ ಮತಾಂತರ ಹೆಚ್ಚಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕೆಂದರೆ ಕಾಯ್ದೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ನನ್ನ ಹೆತ್ತ ತಾಯಿಯನ್ನ ಮತಾಂತರ ಮಾಡಿದ್ದಾರೆ: ಗೂಳಿಹಟ್ಟಿ ಶೇಖರ್

ಕೆಲವು ಚರ್ಚ್‍ಗಳಲ್ಲಿ ಬ್ರೈನ್ ವಾಶ್ ಮಾಡುತ್ತಿದ್ದಾರೆ, ತಾಯಿಗೂ ಬ್ರೈನ್ ವಾಶ್ ಮಾಡಿದ್ದಾರೆ. ದಲಿತರು, ಹಿಂದುಳಿದ ವರ್ಗದವರನ್ನು ಜಾಸ್ತಿ ಮತಾಂತರ ಮಾಡುತ್ತಿದ್ದಾರೆ. ಇದೊಂದು ದೊಡ್ಡ ಪಿಡುಗು. ಇದಕ್ಕೆ ಕಡಿವಾಣ ಹಾಕಬೇಕು ಎಂದು ಗೂಳಿಹಟ್ಟಿ ಶೇಖರ್ ಒತ್ತಾಯಿಸಿದರು.

ಸದಸ್ಯರ ಮಾತುಗಳನ್ನು ಕೇಳಿದ ಗೃಹಸಚಿವ ಆರಗ ಜ್ಞಾನೇಂದ್ರ, ಆಮಿಷವೊಡ್ಡಿ ಮತಾಂತರ ಮಾಡುವುದು ಅಪರಾಧ. ಶಾಂತಿ ಭಂಗವುಂಟು ಮಾಡುವ ಆತಂಕವೂ ಇದೆ. ಮುಂದೆ ಏನು ಮಾಡಬೇಕು ಎಂಬ ಕುರಿತು ರಾಜ್ಯ ಸರ್ಕಾರ ತೀರ್ಮಾನ ಮಾಡಲಿದೆ ಎಂದು ಹೇಳಿದರು.

Comments

Leave a Reply

Your email address will not be published. Required fields are marked *