ಉಡುಪಿ: ಬ್ರಹ್ಮಾವರ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಯಿಂದ ಕಿರುಕುಳ ಆರೋಪ ಮಾಡಿ ಹೆಲ್ತ್ ಇನ್ಸ್ ಪೆಕ್ಟರ್ ಆತ್ಮಹತ್ಯೆ ಯತ್ನಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ.
ಹಿರಿಯ ಅಧಿಕಾರಿಯಿಂದ ತನಗಾಗಿರುವ ಕಿರುಕುಳವನ್ನು ಜಿಲ್ಲಾಧಿಕಾರಿಗೆ ಪತ್ರದಲ್ಲಿ ಬರೆದಿಟ್ಟು ಶಿವಮೊಗ್ಗ ಮೂಲದ ನಾಗರಾಜ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಭದ್ರಾವತಿ ತಾಲೂಕಿನ ಮೂಡಲ ವಿಠಲಾಪುರದವನಾಗಿರುವ ನಾಗರಾಜ್ ಬ್ರಹ್ಮಾವರ ತಾಲೂಕು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೂರು ತಿಂಗಳ ಹಿಂದೆ ನೇಮಕವಾಗಿದ್ದರು.


ಕರ್ತವ್ಯದ ವಿಚಾರವಾಗಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಮಹೇಶ್ ಐತಾಳ್ ಕಿರುಕುಳ ನೀಡುತ್ತಿದ್ದರು ಎಂದು ದೂರಿದ್ದಾರೆ. ಈ ಬಗ್ಗೆ ಡಿ.ಎಚ್.ಒ ಗೆ ದೂರು ನೀಡಿದ್ದರೂ ಪ್ರಯೋಜನವಾಗದೇ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಡಿಸಿಗೆ ಬರೆದಿರುವ ಪತ್ರದಲ್ಲಿ ಹೇಳಿಕೊಂಡಿದ್ದಾರೆ.
ಸದ್ಯ ಮಣಿಪಾಲ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ನಾಗರಾಜ್‍ಗೆ ಚಿಕಿತ್ಸೆ ನೀಡಲಾಗುತ್ತಿದೆ. ಆತ್ಮಹತ್ಯೆಗೆ ಮುನ್ನ ತನ್ನ ಕೊಠಡಿಯಲ್ಲಿ ನಾಗರಾಜ್ ಮಾತನಾಡಿದ್ದನ್ನು ಆತನ ಸ್ನೇಹಿತ ವೀಡಿಯೋ ಮಾಡಿದ್ದಾನೆ. ತನಗಾಗುತ್ತಿರುವ ಕಿರುಕುಳ ಬಗ್ಗೆ ಮಾತನಾಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Leave a Reply