ಮೆರವಣಿಗೆ ವೇಳೆ ಗಣಪತಿ ಕಿವಿ, ಕಾಲಿಗೆ ದುಷ್ಕರ್ಮಿಗಳಿಂದ ಕಲ್ಲೆಸೆತ!

– ಪರಿಸ್ಥಿತಿ ನಿಯಂತ್ರಿಸಲು 300ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

ಬೆಳಗಾವಿ: ಗಣಪತಿಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ನಗರದ ಬೆಂಡಿ ಬಜಾರ್ ನ ತೆಂಗಿನಕರಗಲ್ಲಿಯಲ್ಲಿ ನಡೆದಿದೆ.

ಕಳೆದ ರಾತ್ರಿ ಗಣಪತಿಯ ಮೆರವಣಿಗೆಯ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಗಣಪತಿಯ ಕಿವಿ ಭಾಗ ಮತ್ತು ಕಾಲಿಗೆ ದುಷ್ಕರ್ಮಿಗಳು ಕಲ್ಲು ಎಸೆದಿದ್ದಾರೆ. ಪರಿಣಾಮ ಎರಡು ರಿಕ್ಷಾ ಮತ್ತು ಒಂದು ಟಾಟಾ ಏಸ್ ವಾಹನಗಳು ಜಖಂ ಆಗಿದೆ. ಹೀಗಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು 300 ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿತ್ತು.

ಸದ್ಯಕ್ಕೆ ಬೆಳಗಾವಿ ನಗರದಲ್ಲಿ ಎಲ್ಲೆಡೆ ಬಿಗುವಿನ ವಾತಾವರಣ ಉಂಟಾಗಿದ್ದು, ಸ್ಥಳಕ್ಕೆ ಬೆಳಗಾವಿ ಕಮಿಷನರ್ ಡಿಸಿ ರಾಜಪ್ಪ ಡಿಸಿಪಿ ಸೀಮಾ ಲಾಟ್ಕರ್ ಭೇಟಿ ನೀಡಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.

ಈ ಘಟನೆ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

Comments

Leave a Reply

Your email address will not be published. Required fields are marked *