ಅಪ್ರಾಪ್ತ ಬಾಲಕರಿಂದ ವೃದ್ಧೆ ಮೇಲೆ ಅತ್ಯಾಚಾರಕ್ಕೆ ಯತ್ನ

ಶಿವಮೊಗ್ಗ: ಅಪ್ರಾಪ್ತ ಬಾಲಕರು ಕಣ್ಣು ಕಾಣದ, ಕಿವಿ ಕೇಳದ ವೃದ್ಧೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಶಿವಮೊಗ್ಗ ನಗರದ ಶರಾವತಿ ನಗರ ಬಡಾವಣೆಯಲ್ಲಿ ನಡೆದಿದೆ.

ಮೇ 25 ರಿಂದ 27 ರವರೆಗೆ ಪ್ರತಿದಿನ ರಾತ್ರಿ ನಾಲ್ವರು ಬಾಲಕರು 70 ವರ್ಷದ ವೃದ್ಧೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಒಂಟಿಯಾಗಿ ಮನೆಯಲ್ಲಿ ವಾಸಿಸುತ್ತಿರುವ ಅವರು ಮನೆ ಮನೆಗೆ ತೆರಳಿ, ಭಿಕ್ಷೆ ಬೇಡಿಕೊಂಡು, ಜೀವನ ನಿರ್ವಹಣೆ ಮಾಡುತ್ತಿದ್ದರು.

ವೃದ್ಧೆ ಎರಡು ಕಣ್ಣು ಮಂಜಾಗಿದ್ದು, ಕಿವಿ ಕೂಡ ಕೇಳಲಾಗದ ಪರಿಸ್ಥಿತಿಯಲ್ಲಿದ್ದಾರೆ. ರಾತ್ರಿ ವೇಳೆ ಕುಡಿದು ಬಂದ ಅಪ್ರಾಪ್ತ ಬಾಲಕರು ಲೈಂಗಿಕ ಕಿರುಕುಳ ನೀಡಿದ್ದು, ಈ ವೇಳೆ ವೃದ್ಧೆ ಕೂಗಿಕೊಂಡ ಪರಿಣಾಮ ನೆರೆಹೊರೆಯವರು ರಕ್ಷಣೆಗೆ ಧಾವಿಸಿದ್ದಾರೆ. ಈ ವೇಳೆ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಓರ್ವ ಅಪ್ರಾಪ್ತನ್ನು ವಶಕ್ಕೆ ಪಡೆಯಲಾಗಿದೆ.

ಶಿವಮೊಗ್ಗದ ವಿನೋಭನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಇನ್ನುಳಿದ ಆರೋಪಿಗಳ ಶೋಧ ಕಾರ್ಯದಲ್ಲಿ ಪೊಲೀಸರು ತೊಡಗಿದ್ದಾರೆ.

Comments

Leave a Reply

Your email address will not be published. Required fields are marked *