ಮಹಿಳೆಯ ಮೇಲೆ ಸಂಬಂಧಿಯಿಂದಲೇ ಅತ್ಯಾಚಾರಕ್ಕೆ ಯತ್ನ – ಆರೋಪಿ ಅರೆಸ್ಟ್‌

ಶಿವಮೊಗ್ಗ: ಅವಿವಾಹಿತ ಮಹಿಳೆ (40) ಮೇಲೆ ದೂರದ ಸಂಬಂಧಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ರಿಪ್ಪನ್‌ಪೇಟೆ (Ripponpet) ಪೊಲೀಸರು ಬಂಧಿಸಿದ್ದಾರೆ.

ಬೆಳ್ಳೂರು ನಿವಾಸಿ ಪ್ರಕಾಶ್ (40) ಬಂಧಿತ ಆರೋಪಿಯಾಗಿದ್ದಾನೆ. ಹೊಸನಗರ (Hoasanagara) ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ 40 ವರ್ಷದ ಅವಿವಾಹಿತ ಮಹಿಳೆಯೊಬ್ಬರ ಮೇಲೆ ಆರೋಪಿ ಮಂಗಳವಾರ ಮಧ್ಯಾಹ್ನ ಅತ್ಯಾಚಾರಕ್ಕೆ ಯತ್ನಿಸಿದ್ದ ಎಂದು ಆರೋಪಿಸಲಾಗಿದೆ. ಈ ಬಗ್ಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.. ಇದನ್ನೂ ಓದಿ: ಹಿಂದಿ ಕಿರುತೆರೆ ನಟ ಆಶಿಶ್ ಕಪೂರ್ ಅತ್ಯಾಚಾರ ಪ್ರಕರಣದಲ್ಲಿ ಅರೆಸ್ಟ್

ಪ್ರಕರಣ ದಾಖಲಾಗುತಿದ್ದಂತೆ ಡಿವೈಎಸ್‌ಪಿ ಅರವಿಂದ್ ಕಲಗುಜ್ಜಿ, ಸಿಪಿಐ ಗುರಣ್ಣ ಹೆಬ್ಬಾಳ್ ಮಾರ್ಗದರ್ಶನದಲ್ಲಿ ಪಿಎಸ್‌ಐ ರಾಜುರೆಡ್ಡಿ ನೇತೃತ್ವದಲ್ಲಿ ಒಂದು ಗಂಟೆಯೊಳಗೆ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ನ್ಯಾಯಲಯದ ಮುಂದೆ ಹಾಜರುಪಡಿಸಿ ಜೈಲಿಗೆ ಕಳುಹಿಸಲಾಗಿದೆ. ಇದನ್ನೂ ಓದಿ: ಮಂಡ್ಯ | ಆಸ್ತಿಗಾಗಿ ಅಪ್ಪನನ್ನೇ ಟ್ರ್ಯಾಪ್‌ ಮಾಡಲು ಹೋಗಿ ತಗ್ಲಾಕೊಂಡ ಮಗ