ಬೆಳಗಾವಿ | ಧಾರಾಕಾರ ಮಳೆಗೆ ಕೊಚ್ಚಿಹೋದ ಆಟೋ – ಚಾಲಕ ದುರ್ಮರಣ

ಸಾಂದರ್ಭಿಕ ಚಿತ್ರ

ಬೆಳಗಾವಿ: ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ (Rain) ಆಟೋ ಕೊಚ್ಚಿಕೊಂಡು ಹೋಗಿ ಚಾಲಕ ಸಾವನ್ನಪ್ಪಿದ ಘಟನೆ ಯರಗಟ್ಟಿ ತಾಲೂಕಿನ ಚಿಕ್ಕಬೂದನೂರ ಗ್ರಾಮದಲ್ಲಿ ನಡೆದಿದೆ.

ಮಳೆರಾಯನ ಅರ್ಭಟದಿಂದ ಗ್ರಾಮದ ಹೊರವಲಯದ ಹಳ್ಳ ಮೈತುಂಬಿ ಹರಿಯುತ್ತಿದೆ. ಹಳ್ಳದ ಬಳಿ ಆಟೋ ದಾಟಿಸುವಾಗ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದೆ. ಆಟೋ ಚಾಲಕನ ಮೃತದೇಹಕ್ಕಾಗಿ ಗ್ರಾಮಸ್ಥರು ಹಾಗೂ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಇದನ್ನೂ ಓದಿ: ವಿಮಾನ ದುರಂತ – ನಿಶ್ಚಿತಾರ್ಥ ಮುಗಿಸಿ ಹೊರಟ ಜೋಡಿಯ ದಾರುಣ ಅಂತ್ಯ

ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 5 ಸಾವಿರ ಕ್ಯುಸೆಕ್ ನೀರು ಬಿಡುಗಡೆ