ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಶ್ರೀನಿವಾಸ್ ಪ್ರಸಾದ್ ನೇಮಕ

ಬೆಂಗಳೂರು: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಶ್ರೀನಿವಾಸ್ ಪ್ರಸಾದ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಉಪಾಧ್ಯಕ್ಷ ಸ್ಥಾನವನ್ನು ನೀಡಿದ್ದಾರೆ.

ಮೈಸೂರು ಭಾಗದಲ್ಲಿ ಬಿಜೆಪಿ ಬಲಪಡಿಸಲು ಬಿಜೆಪಿ ಪ್ಲಾನ್ ರೂಪಿಸಿದ್ದು, ಈ ಕಾರಣಕ್ಕಾಗಿ ದಲಿತ ಸಮುದಾಯಕ್ಕೆ ಪಕ್ಷ ಸಂಘಟನೆಯಲ್ಲಿ ಒತ್ತು ನೀಡಲು ಶ್ರೀನಿವಾಸ್ ಪ್ರಸಾದ್ ಅವರನ್ನು ಬಿಎಸ್‍ವೈ ನೇಮಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ನಂಜನಗೂಡು ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಶ್ರೀನಿವಾಸ ಪ್ರಸಾದ್ ಅವರು 21,334 ಮತಗಳ ಆಂತರದಿಂದ ಸೋತಿದ್ದರು. ಜೆಡಿಎಸ್ ಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ್ದ ಕಳಲೆ ಕೇಶವಮೂರ್ತಿಗೆ 86,212 ಮತಗಳು ಬಿದ್ದರೆ, ಶ್ರೀನಿವಾಸ ಪ್ರಸಾದ್ ಅವರಿಗೆ 64,878 ಮತಗಳು ಬಿದ್ದಿತ್ತು.

ನಂಜನಗೂಡು ಉಪ ಚುನಾವಣೆ ನನ್ನ ಕೊನೆಯ ಚುನಾವಣೆ. ಇನ್ನು ಮುಂದೆ ನಾನು ಚುನಾವಣೆಗೆ ನಿಲ್ಲುವುದಿಲ್ಲ ಎಂದು ಶ್ರೀನಿವಾಸ್ ಪ್ರಸಾದ್ ಘೋಷಿಸಿದ್ದರು.

Comments

Leave a Reply

Your email address will not be published. Required fields are marked *