ಬಿಎಸ್‍ವೈ ಸಿಎಂ ಆಗ್ತಾರಂತಾ ಶೋಭಾ ಕರಂದ್ಲಾಜೆ ಕನಸು ಕಾಣುತ್ತಿದ್ದಾರೆ: ಸಿದ್ದರಾಮಯ್ಯ ವ್ಯಂಗ್ಯ

ಉಡುಪಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗ್ತಾರೆ ಅಂತ ಸಂಸದೆ ಶೋಭಾ ಕರಂದ್ಲಾಜೆ ಕನಸು ಕಾಣುತ್ತಿದ್ದಾರೆ. ರಾತ್ರಿ-ಹಗಲು ಎರಡು ಹೊತ್ತು ಕನಸು ಕಂಡರೂ ಬಿ.ಎಸ್.ಯಡಿಯೂರಪ್ಪ ಸಿಎಂ ಆಗಲ್ಲ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಉಡುಪಿಯ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಗೂರಿನಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ, ಶೋಭಾ ಕರಂದ್ಲಾಜೆ ಅವರು ಭ್ರಮೆಯಲ್ಲಿ ಕಾಲ ಕಳೆಯುತ್ತಿದ್ದಾರೆ. ಮತ್ತೊಮ್ಮೆ ಹೇಳುತ್ತೇನೆ ಯಾವುದೇ ಕಾರಣಕ್ಕೂ ಬಿ.ಎಸ್.ಯಡಿಯೂರಪ್ಪ ಸಿಎಂ ಆಗಲು ಸಾಧ್ಯವೇ ಇಲ್ಲ. ಈ ಇಬ್ಬರು ನಾಯಕರಿಗೆ ಸುಳ್ಳು ಹೇಳುವುದೇ ಕೆಲಸವಿದೆ ಎಂದು ಕುಟುಕಿದರು.

ಬಿಎಸ್‍ವೈ ಪ್ರಾಮಾಣಿಕರಾ:
ಬಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾನೆಸ್ಟಾ? ಎಂದು ಪ್ರಶ್ನಿಸಿ, ಅವರು ಜೈಲಿಗೆ ಹೋದ ಗಿರಾಕಿ ಎಂದು ಕುಟುಕಿದ ಮಾಜಿ ಸಿಎಂ, ಬಿಜೆಪಿ ಹಾಗೂ ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ಇಲ್ಲ ಎಂದು ಲೇವಡಿ ಮಾಡಿದರು.

ಜೆಡಿಎಸ್-ಕಾಂಗ್ರೆಸ್ ಮಧ್ಯದ ಹಳೇ ವೈಷಮ್ಯ ಮರೆತಿದ್ದೇವೆ. ಈಗ ನಾವು ಉಪಚುನಾವಣೆ ಪ್ರಚಾರದಲ್ಲಿ ಸಂಪೂರ್ಣ ತೊಡಗಿಸಿಕೊಂಡಿದ್ದೇವೆ. ಸದ್ಯ ಮತ್ತು ಮುಂದೆ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಒಟ್ಟಾಗಿ ಹೋರಾಡಲಿದೆ. ರಾಜ್ಯದಲ್ಲಿ ನಡೆಯುತ್ತಿರುವ ಐದು ಕ್ಷೇತ್ರದ ಉಪ ಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿಯೂ ಮೈತ್ರಿ ಮುಂದುವರೆಯುತ್ತದೆ. ಕೋಮುವಾದಿ ಬಿಜೆಪಿಯನ್ನು ಸೋಲಿಸುವುದೇ ನಮ್ಮ ಗುರಿ ಎಂದರು.

ಬಂಗಾರಪ್ಪ ಅವರು ಕಾಂಗ್ರೆಸ್‍ನಿಂದ ಮುಖ್ಯಮಂತ್ರಿ ಆಗಿದ್ದವರು. ಸಾಮಾಜಿಕ ನ್ಯಾಯ ಮಧು ಬಂಗಾರಪ್ಪ ಅವರಿಗೆ ರಕ್ತದಲ್ಲಿಯೇ ಬಂದಿದ್ದು, ಅವರು ಜಯಗಳಿಸಿದರೆ, ಬಂಗಾರಪ್ಪ ಅವರ ಆತ್ಮಕ್ಕೆ ಶಾಂತಿ ಸಿಗುತ್ತದೆ ಎಂದರು. ಈ ಮೂಲಕ ಮೂಲಕ ಸಿದ್ದರಾಮಯ್ಯ ಅವರು ಉಡುಪಿಯ ಬೈಂದೂರಲ್ಲಿ ಮಧು ಬಂಗಾರಪ್ಪ ಅವರ ಪರ ಭರ್ಜರಿ ಪ್ರಚಾರ ಮಾಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *