ಸೈನಿಕರಿಗೆ ಮೋದಿ ಆತ್ಮಸ್ಥೈರ್ಯ, ಉಗ್ರರಿಗೆ ಇದು ಎಚ್ಚರಿಕೆ: ಬಿ.ವೈ ವಿಜಯೇಂದ್ರ

ಕೋಲಾರ: ಮೋದಿಯವರ ದಿಟ್ಟ ನಾಯಕತ್ವದಿಂದ ನಮ್ಮ ದೇಶದ ಯೋಧರಿಗೆ ದೊಡ್ಡ ಶಕ್ತಿ ತಂದುಕೊಟ್ಟಿದೆ. ಹಾಗಾಗಿ ಇಂದು ಯೋಧರು ನಿರ್ಭೀತಿಯಿಂದ ಉಗ್ರರ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ(B Y Vijayendra) ಹೇಳಿದರು.

ಕೋಲಾರದ(Kolar) ಜನಾಕ್ರೋಶ ರ‍್ಯಾಲಿಗೂ ಮುನ್ನ ಕೋಲಾರಮ್ಮ ದೇವಾಲಯದಲ್ಲಿ `ಆಪರೇಷನ್ ಸಿಂಧೂರ'(Operation Sindoor) ಯಶಸ್ವಿಯಾದ ಹಿನ್ನಲೆ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು. ಉಗ್ರರ ಮೇಲೆ ಕಳೆದ ರಾತ್ರಿಯಿಂದ ದಾಳಿ ಆರಂಭವಾಗಿದೆ. ಯಶಸ್ಸು ಸಿಗಲಿ ಎಂದು ತಾಯಿ ಕೋಲಾರಮ್ಮ ಬಳಿ ಪ್ರಾರ್ಥನೆ ಮಾಡಿದ್ದೇನೆ ಎಂದರು. ಇದನ್ನೂ ಓದಿ: ಆಪರೇಷನ್ ಸಿಂಧೂರ | ಇದು ಭಾರತೀಯ ಸೇನೆಯ ನಿಜವಾದ ಮುಖ: ಶಿವಕಾರ್ತಿಕೇಯನ್

ದೇಶದಲ್ಲಿ ಈ ಕಾಂಗ್ರೆಸ್‌ನ ದ್ವಂದ್ವ ಮತ್ತು ದೇಶ ವಿರೋಧಿ ನೀತಿಯಿಂದ ಉಗ್ರಗಾಮಿಗಳು ಅಟ್ಟಹಾಸದಿಂದ ಮೆರೆಯುತ್ತಿದ್ದಾರೆ. ಕಾಂಗ್ರೆಸ್‌ನ ಈ ನೀತಿಯಿಂದಲೇ ಜಮ್ಮು ಕಾಶ್ಮೀರದಲ್ಲಿ ಸಾವಿರಾರು ಹಿಂದೂ ಕುಟುಂಬಗಳು ಮನೆ ಮಠ ಕಳೆದುಕೊಂಡಿದ್ದಾರೆ. ಯೋಧರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ರಿಯಲ್ ಹೀರೋಗಳು ನೀವೇ – ‘ಆಪರೇಷನ್ ಸಿಂಧೂರ’ಕ್ಕೆ ಮಮ್ಮುಟ್ಟಿ ಮೆಚ್ಚುಗೆ

ನಮಗೆ ಸಂಪೂರ್ಣ ವಿಶ್ವಾಸ ಇದೆ. ಉಗ್ರಗಾಮಿಗಳ ವಿರುದ್ಧ ಹೋರಾಟದಲ್ಲಿ ಯಶಸ್ಸು ಸಿಗುತ್ತದೆ. ಇಂತಹ ಯುದ್ಧದ ಸಂದರ್ಭದಲ್ಲಿ ಎಲ್ಲರೂ ಒಗ್ಗಟ್ಟಾಗಿ ಬೆಂಬಲಿಸುತ್ತಿದ್ದಾರೆ. ಆದರೆ ಕಾಂಗ್ರೆಸ್‌ನವರು ದೇಶ ವಿರೋಧಿ ಚಟುವಟಿಕೆಗಳಿಗೆ ಬೆಂಬಲಿಸಬಾರದು. ದೇಶದ ಪರ ಗಟ್ಟಿಯಾಗಿ ನಿಲ್ಲಬೇಕು ಎಂದರು. ಇದನ್ನೂ ಓದಿ: LIVE – ʼಆಪರೇಷನ್‌ ಅಭ್ಯಾಸ್ʼ ಹೆಸರಲ್ಲಿ ದೇಶಾದ್ಯಂತ ಮಾಕ್‌ ಡ್ರಿಲ್‌

ಯುದ್ಧದ ಸಂದರ್ಭದಲ್ಲಿ ಕಾಂಗ್ರೆಸ್‌ನವರ(Congress) ಶಾಂತಿ ಸ್ಥಾಪನೆ ನಿಲುವು ಸರಿಯಲ್ಲ. ಇದನ್ನು ಬದಿಗಿಟ್ಟು ಸೈನಿಕರ ಪರವಾಗಿ ನಿಲ್ಲಬೇಕು. ನಮ್ಮ ಯೋಧರು ಪಾಕಿಸ್ತಾನದ ವಿರುದ್ಧ ಹೋರಾಟ ಆರಂಭಿಸಿದ್ದು, ಈ ಯುದ್ಧದಲ್ಲಿ ಭಾರತಕ್ಕೆ ವಿಜಯ ಸಿಗಬೇಕು. ಉಗ್ರರು ಇಡೀ ಜಗತ್ತಿಗೆ ಮಾರಕವಾಗಿ ರಕ್ತದೋಕುಳಿ ನಡೆಸುತ್ತಿದ್ದಾರೆ. ಇದಕ್ಕೆ ಪ್ರತೀಕಾರ ತೆಗೆದುಕೊಳ್ಳುವ ದಿಟ್ಟ ನಿರ್ಧಾರವನ್ನು ಮೋದಿಯವರು ತೆಗೆದುಕೊಂಡಿದ್ದಾರೆ ಎಂದು ಹೇಳಿದರು.