ರಾಯಚೂರಲ್ಲಿ ಡೆತ್‌ನೋಟ್ ಬರೆದಿಟ್ಟು ಬಿಎ ವಿದ್ಯಾರ್ಥಿ ನೇಣಿಗೆ ಶರಣು

ರಾಯಚೂರು: ಡೆತ್‌ನೋಟ್ (Death Note) ಬರೆದಿಟ್ಟು ವಿದ್ಯಾರ್ಥಿಯೋರ್ವ (Student) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ರಾಯಚೂರು (Raichur) ಜಿಲ್ಲೆಯ ಸಿರವಾರದಲ್ಲಿ (Sirwar) ನಡೆದಿದೆ.

ವೆಂಕಟೇಶ್ ನಾಯಕ್ (20) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಈತ ಧಾರವಾಡದಲ್ಲಿ ಬಿಎ ಪದವಿ ವ್ಯಾಸಂಗ ಮಾಡುತ್ತಿದ್ದು, ಇತ್ತೀಚಿಗೆ ಊರಿಗೆ ಬಂದಿದ್ದ. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನನ್ನ ಸಾವಿಗೆ ಯಾರೂ ಜವಾಬ್ದಾರರಲ್ಲ, ಹೊಣೆಗಾರರಲ್ಲ ಎಂದು ಡೆತ್ ನೋಟ್ ಬರೆದು ನೇಣಿಗೆ ಶರಣಾಗಿದ್ದಾನೆ. ಇದನ್ನೂ ಓದಿ: ಪತಂಜಲಿ ಸಸ್ಯಾಹಾರಿ ಹರ್ಬಲ್ ಟೂತ್ ಪೌಡರ್‌ನಲ್ಲಿ ಮಾಂಸಾಹಾರಿ ಅಂಶ – ದೆಹಲಿ ಹೈಕೋರ್ಟ್‌ಗೆ ಅರ್ಜಿ

ವಿದ್ಯಾರ್ಥಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕುಟುಂಬಸ್ಥರು ತಮ್ಮದೇ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮನೆಯಲ್ಲಿ ಒಬ್ಬನೇ ಉಳಿದಿದ್ದ ವೆಂಕಟೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ಸಂಬಂಧ ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: BMTC ನಿರ್ವಾಹಕ ಹುದ್ದೆಗೆ ಪರೀಕ್ಷೆ, ಕಟ್ಟುನಿಟ್ಟಿನ ನಿಗಾವಹಿಸುವಂತೆ ಕ್ರಮ – ಕೆಇಎ