ಬಾಗಲಕೋಟೆ: ಟಂಟಂ, ಬೊಲೆರೊ ಮುಖಾಮುಖಿ ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿಯ ಕೈ ತುಂಡಾಗಿ, ಆರು ಮಂದಿ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬಾಗಲಕೋಟೆಯ ನಗರದ ವಿದ್ಯಾಗಿರಿಯಲ್ಲಿ ನಡೆದಿದೆ.
ಅಭಿಷೇಕ್ ಘಟನೆಯಲ್ಲಿ ಬಲಗೈ ಕಳೆದು ಕೊಂಡ ವಿದ್ಯಾರ್ಥಿಯಾಗಿದ್ದು, ಉಳಿದಂತೆ ಆರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯ ಲಯನ್ ಆಂಗ್ಲ ಮಾಧ್ಯಮ ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದ ವೇಳೆ ಎದುರಿನಿಂದ ವೇಗವಾಗಿ ಬಂದ ಬುಲೆರೋ ಡಿಕ್ಕಿಯಾಗಿದೆ.

ಅಪಘಾತದ ರಭಸಕ್ಕೆ ವಾಹನದಲ್ಲಿದ್ದ ಆರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳನ್ನು ವಾಹನ ಸದ್ಯ ಕೈ ಕಳೆದು ಕೊಂಡಿರುವ ಅಭಿಷೇಕನನ್ನು ಸ್ಥಳೀಯ ಕೆರೋಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ವಿದ್ಯಾರ್ಥಿಗಳಲ್ಲಿ ಮೂವರ ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಅಪಘಾತಕ್ಕೆ ಬೊಲೆರೊ ವಾಹನ ಚಾಲಕನ ಅತೀ ವೇಗವೇ ಕಾರಣ ಎನ್ನಲಾಗಿದ್ದು, ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಎಸ್ಪಿ ವಂಶಿಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

https://www.youtube.com/watch?v=fsssAfdZ8K8

Leave a Reply