ಬೆಳಗಾವಿಯ ಗೌಪ್ಯ ಸಭೆ ಬಿಜೆಪಿ ಅಧಿಕೃತ ಸಭೆಯಲ್ಲ: ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ಉದ್ದೇಶಪೂರ್ವಕವಾಗಿ ಯಾರನ್ನೂ ಹೊರಗಿಟ್ಟು ಸಭೆ ನಡೆಸುವ ಅವಶ್ಯಕತೆ ಇರಲಿಲ್ಲ ಎಂದು ಸಚಿವ ಉಮೇಶ್ ಕತ್ತಿ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿರುಗೇಟು ನೀಡಿದರು.

ಸಚಿವ ಉಮೇಶ್ ಕತ್ತಿ ನಿವಾಸದಲ್ಲಿ ನಡೆದ ಗೌಪ್ಯ ಸಭೆ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಬೆಳಗಾವಿಯಲ್ಲಿ ನಡೆದ ಸಭೆ ಬಿಜೆಪಿ ಅಧಿಕೃತ ಸಭೆಯಲ್ಲ. ಹೀಗಾಗಿ ಈ ಸಭೆಗೆ ಹೆಚ್ಚಿನ ಮಹತ್ವ ಬೇಡ ಎಂದು ತಿಳಿಸಿದರು.

ಯಾರನ್ನು ಹೊರಗಿಟ್ಟು ಈ ಸಭೆಯನ್ನು ಮಾಡಲಾಗಿದೆ ಎನ್ನುವುದು ಮಾಧ್ಯಮಗಳಿಂದ ಗೊತ್ತಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಯಾರು ಎಷ್ಟು ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ ಎಂಬುದು ಪಕ್ಷದ ವರಿಷ್ಠರಿಗೆ ಗೊತ್ತಿದೆ. ದಿನಕ್ಕೊಬ್ಬರಂತೆ ಸಭೆ ನಡೆಸುತ್ತ ಹೋದರೆ ಅದಕ್ಕೆಲ್ಲ ಉತ್ತರಿಸುವ ಗೋಜಿಗೆ ಹೋಗಲ್ಲ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: 2047ರ ಮೊದಲು ನವ ಭಾರತವನ್ನು ನಿರ್ಮಿಸುವ ಗುರಿ ಹೊಂದಿದ್ದೇವೆ: ಮೋದಿ

2008ರಿಂದ ಪಕ್ಷದ ಶಿಸ್ತಿನ ಸಿಪಾಯಿಯಾಗಿ ಕೆಲಸ ಮಾಡುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಪಕ್ಷದ ಬಲವರ್ಧನೆಗೆ ಕೆಲಸ ಮಾಡುತ್ತೇವೆ. ಈಗ ನಡೆದಿರುವ ವಿದ್ಯಮಾನಗಳನ್ನು ಪಕ್ಷದ ವರಿಷ್ಠರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದರು. ಇದನ್ನೂ ಓದಿ: 2047ರ ಮೊದಲು ನವ ಭಾರತವನ್ನು ನಿರ್ಮಿಸುವ ಗುರಿ ಹೊಂದಿದ್ದೇವೆ: ಮೋದಿ

Comments

Leave a Reply

Your email address will not be published. Required fields are marked *