ಬಸವಲಿಂಗ ಶ್ರೀ ವೀಡಿಯೋ ಕಾಲ್ ವೈರಲ್- ಮೂವರು ಮಹಿಳೆಯರ ಪ್ರತ್ಯೇಕ ವಿಚಾರಣೆ

ರಾಮನಗರ: ಮಾಗಡಿಯ (Magadi) ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮಹಿಳೆಯೊಬ್ಬರ ಜೊತೆ ಸ್ವಾಮೀಜಿ ವೀಡಿಯೋ ಕಾಲ್ (Video Call) ಮಾಡಿ ಮಾತನಾಡಿದ್ದಾರೆ ಎನ್ನಲಾದ ವೀಡಿಯೋ ಈಗಾಗಲೇ ವೈರಲ್ (Video Viral) ಆಗಿದ್ದು, ಈ ವೀಡಿಯೋ ಆಧರಿಸಿ ಅನುಮಾನಿತ ಮೂವರು ಮಹಿಳೆಯರನ್ನು (Woman) ಪೊಲೀಸರು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.

ಬಂಡೆಮಠದ (Bande Mutt) ಬಸವಲಿಂಗ ಶ್ರೀಗಳ (Basavalinga Swamiji) ಆತ್ಮಹತ್ಯೆ ಪ್ರಕರಣ ಇದೀಗ ಮೇಜರ್ ಟ್ವಿಸ್ಟ್ ಪಡೆದುಕೊಂಡಿದೆ. ನಿನ್ನೆ ಶ್ರೀಗಳು ಬರೆದಿದ್ದಾರೆ ಎನ್ನಲಾದ ಡೆತ್‌ನೋಟ್‍ನ ಒಂದು ಪುಟ ವೈರಲ್ ಆದ ಬೆನ್ನಲ್ಲೆ ಇದೀಗ ಶ್ರೀಗಳ ವೀಡಿಯೋ ಕಾಲ್ ತುಣುಕೊಂದು ವೈರಲ್ ಆಗಿದ್ದು, ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಮಹಿಳೆಯೊಬ್ಬಳ ಜೊತೆ ಸ್ವಾಮೀಜಿ ವೀಡಿಯೋ ಕಾಲ್‍ನಲ್ಲಿ ಮಾತನಾಡುತ್ತಿರುವ ವೀಡಿಯೋ ದೊರೆತಿದ್ದು, ಇದರ ಹಿಂದಿರುವ ಕಾಣದ ಕೈಗಳ ಹುಡುಕಾಟ ಶುರುವಾಗಿದೆ.

ಆದರೆ ಸ್ವಾಮಿಗಳ ಆತ್ಮಹತ್ಯೆಗೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಸು ದಾಖಲಾಗಿದ್ದು, ಎಫ್‍ಐಆರ್‌ನಲ್ಲಿ ಅನಾಮಧೇಯ ಹೆಸರಿನಲ್ಲಿ 1 ಆರೋಪಿ ಎಂದು ಹೇಳಲಾಗಿದೆ. ಸ್ವಾಮೀಜಿಯ ಡೆತ್ ನೋಟ್‍ನಲ್ಲಿ ಹಲವರ ಹೆಸರು ಉಲ್ಲೇಖವಾಗಿದ್ದರೂ ಯಾರ ಹೆಸರೂ ಸಹ ಎಫ್‍ಐಆರ್‌ನಲ್ಲಿ ದಾಖಲಾಗದೆ ಇರೋದು ಪ್ರಕರಣ ಮುಚ್ಚಿಹಾಕುವ ಪ್ರಯತ್ನ ಮಾಡಲಾಗ್ತಿದ್ಯಾ ಎನ್ನುವ ಅನುಮಾನ ವ್ಯಕ್ತವಾಗಿದೆ. ಇನ್ನು ಶ್ರೀಗಳನ್ನು ಖೆಡ್ಡಾಗೆ ಕೆಡವಲು 6 ತಿಂಗಳಿನಿಂದ ಕೆಲ ವ್ಯಕ್ತಿಗಳು ಕುತಂತ್ರ ಹೆಣೆಯಲಾಗಿತ್ತಂತೆ. ಮಹಿಳೆಯೊಂದಿಗೆ ಮಾತನಾಡುತ್ತಿದ್ದ ವೀಡಿಯೋ ಇರುವುದನ್ನು 1 ತಿಂಗಳ ಹಿಂದೆ ಶ್ರೀಗಳ ಗಮನಕ್ಕೆ ತರಲಾಗಿದ್ದು, ಈ ವಿಚಾರ ಗೊತ್ತಾಗುತ್ತಿದ್ದಂತೆ ಬಸವಲಿಂಗ ಸ್ವಾಮೀಜಿ ಖಿನ್ನತೆಗೆ ಒಳಗಾಗಿದ್ದರಂತೆ. ಸದ್ಯ ಶ್ರೀಗಳು ಬಳಸುತ್ತಿದ್ದ 2 ಮೊಬೈಲ್ ವಶಕ್ಕೆ ಪಡೆದಿರುವ ಪೊಲೀಸರು ಒಂದು ವರ್ಷದ ಕಾಲ್ ಡಿಟೇಲ್ಸ್ ತೆಗೆದು ತನಿಖೆ ನಡೆಸುತ್ತಿದ್ದಾರೆ.

ಅಲ್ಲದೇ ಬಸವಲಿಂಗ ಸ್ವಾಮಿ ಶ್ರೀಗಳ ವೈರಲ್ ಆಗಿರುವ ವೀಡಿಯೋ ಆಧರಿಸಿ ಅನುಮಾನಿತ ಮೂವರು ಮಹಿಳೆಯರನ್ನು ಪೊಲೀಸರು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಪ್ರಕರಣ ಒಟ್ಟು 7 ಮಂದಿಯನ್ನು ಈಗಾಗಲೇ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮತ್ತೊಂದೆಡೆ ಬಸವಲಿಂಗ ಶ್ರೀಗಳ ಆರಾಧನಾ ಕಾರ್ಯಕ್ರಮ ನಡೆಸುವ ಸಂಬಂಧ ಇಂದು ಮಠದ ಆವರಣದಲ್ಲಿ ಲಿಂಗಾಯತ ಮುಖಂಡರು ಸಭೆ ನಡೆಸಿದ್ದಾರೆ. ನ. 3 ರಂದು ಶ್ರೀಗಳ 11ನೇ ದಿನದ ಪುಣ್ಯತಿಥಿ ನಡೆಯಲಿದ್ದು, ಕಾರ್ಯಕ್ರಮದ ಉಸ್ತುವಾರಿಯನ್ನು ಬೆಂಗಳೂರಿನ ಬಿನ್ನಿಮಿಲ್ ಗುರುವಣ್ಣದೇವರ ಮಠದ ಶ್ರೀ ನಂಜುಂಡ ಸ್ವಾಮೀಜಿಗೆ ವಹಿಸಲಾಗಿದೆ. ಪುಣ್ಯತಿಥಿ ಬಳಿಕ ಮಠದ ಮುಂದಿನ ಉತ್ತರಾಧಿಕಾರಿ ನೇಮಕ ಮಾಡುವ ಸಾಧ್ಯತೆ ಇದೆ. ಇದನ್ನೂ ಓದಿ: ಬಂಡೆಮಠ ಸ್ವಾಮೀಜಿ ಆತ್ಮಹತ್ಯೆಗೆ ಟ್ವಿಸ್ಟ್- ಮಹಿಳೆಯ ಜೊತೆಗಿನ ವೀಡಿಯೋ ಕಾಲ್ ವೈರಲ್

ಒಟ್ಟಾರೆ ಷಡ್ಯಂತ್ರಕ್ಕೆ ಹೆದರಿ ಡೆತ್ ನೋಟ್ ಬರೆದು ಬಸವಲಿಂಗ ಶ್ರೀಗಳು ಸೂಸೈಡ್ ಮಾಡಿಕೊಂಡಿರೋದು ಬಹಿರಂಗವಾಗಿದೆ. ಶ್ರೀಗಳ ಡೆತ್‍ನೋಟ್ 2 ಮೊಬೈಲ್, ಬರವಣಿಗೆ ಸ್ಯಾಂಪಲ್ ಹಾಗೂ ಡೈರಿ ಜಪ್ತಿ ಮಾಡಿರುವ ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಆತ್ಮಹತ್ಯೆಗೆ ಸ್ಪಷ್ಟ ಕಾರಣ ಏನು ಎಂಬದನ್ನು ಬಯಲು ಮಾಡ್ತಾರಾ ಎಂದು ಕಾದು ನೋಡಬೇಕಿದೆ. ಇದನ್ನೂ ಓದಿ: ಬಂಡೆಮಠದ ಸ್ವಾಮೀಜಿಗೆ ಮಹಿಳೆಯಿಂದ ಬರುತ್ತಿತ್ತು ದೂರವಾಣಿ ಕರೆ- ಡೆತ್‍ನೋಟ್‍ನಲ್ಲಿ ರಹಸ್ಯ ಬಯಲು

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *