ಪ್ರತಿಭಟನೆ ನಡೆಸಿದ್ರೆ ಹುಷಾರ್ – ಬೆಂಗಳೂರು ನಗರ ಪೊಲೀಸ್ ಆಯುಕ್ತರಿಂದ ಖಡಕ್ ವಾರ್ನಿಂಗ್

ಬೆಂಗಳೂರು: ರಾಷ್ಟ್ರೀಯ ಪೌರತ್ವ ಕಾಯ್ದೆ ತಿದ್ದುಪಡಿ ವಿಚಾರ ಸಂಬಂಧ ದೇಶಾದ್ಯಂತ ಪರ- ವಿರೋಧ ಹೇಳಿಕೆಗಳು ವ್ಯಕ್ತವಾಗುತ್ತಿವೆ. ಜೊತೆಗೆ ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ಪ್ರತಿಭಟನೆಯ ಕಾವು ಜೋರಾಗುತ್ತಿದೆ. ಇದರಿಂದ ಎಚ್ಚತ್ತ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಪೌರತ್ವ ಕಾಯ್ದೆ ತಿದ್ದುಪಡಿ ವಿಚಾರ ಸಂಬಂಧ ಯಾವುದೇ ಪ್ರತಿಭಟನೆಗೆ ಅವಕಾಶ ಇಲ್ಲ. ಒಂದು ವೇಳೆ ಪ್ರತಿಭಟನೆ ನಡೆಸಿದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಕೆಲ ಶಿಕ್ಷಣ, ಸಂಸ್ಥೆ ವಿದ್ಯಾರ್ಥಿಗಳು ನಗರದಲ್ಲಿ ಪ್ರತಿಭಟನೆ ನಡೆಸಿವೆ. ವಿಡಿಯೋ ಗ್ರಾಫ್ ಅಧಾರದ ಮೇಲೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದರು.

ಪ್ರತಿಭಟನೆಗೆ ಅವಕಾಶ ಕೋರಿ ಸಾಕಷ್ಟು ಅರ್ಜಿಗಳು ಬಂದಿದ್ದವು. ಇಲ್ಲಿವರೆಗೂ ಯಾರಿಗೂ ಅನುಮತಿ ಕೊಟ್ಟಿಲ್ಲ. ಪ್ರತಿಭಟನೆ ಮಾಡುವವರು ಉತ್ತರ ಭಾರತದ ರಾಜ್ಯಕ್ಕೆ ಹೋಗಿ ಅಲ್ಲಿ ಪ್ರತಿಭಟನೆ ಮಾಡಿ, ನಗರದಲ್ಲಿ ಮಾಡಲು ಅವಕಾಶ ಇಲ್ಲ ಎಂದರು.

ಇದೇ ವೇಳೆ ಇನ್ನೂ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಗಳನ್ನು ಹಾಕುತ್ತಿದ್ದಾರೆ. ಅಂತವರ ಮೇಲೆ ಐಟಿ ಸೆಲ್‍ನಿಂದ ನಿಗಾ ವಹಿಸಲಾಗಿದ್ದು, ಸೂಕ್ತ ಕ್ರಮದ ಎಚ್ಚರಿಕೆ ನೀಡಿದರು.

Comments

Leave a Reply

Your email address will not be published. Required fields are marked *