ರೋಮ್ ಹೊತ್ತಿ ಉರಿಯುವಾಗ ದೊರೆ ನಿರೋ ಪಿಟೀಲು ಬಾರಿಸುತ್ತಿದ್ದ: ಬಿಎಸ್‍ವೈ ವಿರುದ್ಧ ಜೆಡಿಎಸ್ ಕಿಡಿ

ಬೆಂಗಳೂರು: ಸಿಎಂ ಯಡಿಯೂರಪ್ಪ ವಿರುದ್ಧ ಟ್ವಿಟ್ಟರ್ ವಾರ್ ನಡೆಸುತ್ತಿರುವ ಜೆಡಿಎಸ್ ಬೆಳಗ್ಗೆಯಿಂದ ಮೂರು ಟ್ವೀಟ್ ಮಾಡಿ ಬಿಎಸ್‍ವೈನ್ನು ತರಾಟೆಗೆ ತೆಗೆದುಕೊಂಡಿದೆ.

ಉತ್ತರ ಕರ್ನಾಟಕದಲ್ಲಿ ಮಳೆ ಆಗುತ್ತಿದ್ದರೂ ಯಾವುದೇ ಕ್ರಮ ತೆಗೆದುಕೊಳ್ಳದ್ದಕ್ಕೆ ಬಿಎಸ್‍ವೈ ಅವರನ್ನು ಟೀಕೆ ಮಾಡಿರುವ ಜೆಡಿಎಸ್ ರೋಮ್ ಹೊತ್ತಿ ಉರಿಯುವಾಗ ದೊರೆ ನಿರೋ ಪಿಟೀಲು ಬಾರಿಸುತ್ತಿದ್ದ. ಹಾಗೆ ಯಡಿಯೂರಪ್ಪ ದೆಹಲಿಗೆ ಹೋಗಿ ಕುಳಿತಿದ್ದಾರೆ ಎಂದು ವ್ಯಂಗ್ಯವಾಗಿ ಟ್ವೀಟ್ ಮಾಡಿದೆ.

ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಿಂದ ಜರ್ಜರಿತವಾಗಿರುವಾಗ, ಯಡಿಯೂರಪ್ಪ ದೆಹಲಿಗೆ ಹೋಗಿ ಕುಳಿತಿದ್ದಾರೆ. ಕರ್ನಾಟಕ ಸಮಸ್ಯೆ ಹೇಳಿಕೊಳ್ಳೋಕೆ ಮಂತ್ರಿ ಮಂಡಲವು ಇಲ್ಲ. ಇದೇನಾ ನಿಮ್ಮ ಜನ ಮೆಚ್ಚಿನ ಆಡಳಿತ ಮರ್ಯಾದ ಪುರುಷೋತ್ತಮರೇ ಎಂದು ಜೆಡಿಎಸ್ ಟ್ವೀಟ್ ಮಾಡಿದೆ. ನಂತರ ಎರಡನೇ ಟ್ವೀಟ್ ಮಾಡಿರುವ ಜೆಡಿಎಸ್ ಸರ್ಕಾರ ಕಾಣೆಯಾಗಿದೆ ಎಂದು ಹೇಳುವ ಮೂಲಕ ಬಿಎಸ್‍ವೈ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಕರ್ನಾಟಕದ ಹಲವಾರು ಪ್ರದೇಶಗಳಲ್ಲಿ ಅತಿವೃಷ್ಟಿಯಿಂದ ಜನ ನರಳುತ್ತಿದ್ದಾರೆ. ಇದೂವರೆಗೂ ಗಂಜಿ ಕೇಂದ್ರವನ್ನು ಸರ್ಕಾರ ಸ್ಥಾಪಿಸಿಲ್ಲ. ಪರ್ಯಾಯ ವಸತಿ ವ್ಯವಸ್ಥೆ ಕಲ್ಪಿಸಿಲ್ಲ. ಮುಖ್ಯಮಂತ್ರಿ ಇಲ್ಲ, ಮಂತ್ರಿಯೂ ಇಲ್ಲ ಎಂದು ಟ್ವೀಟ್ ಮಾಡಿ ತರಾಟೆಗೆ ತೆಗೆದುಕೊಂಡಿದೆ.

Comments

Leave a Reply

Your email address will not be published. Required fields are marked *