ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಬಾಗಿಲು ತಟ್ಟಿದ ‘ಕೈ’ ನಾಯಕರು!

ಬೆಂಗಳೂರು: ಸಚಿವ ಸ್ಥಾನಕ್ಕಾಗಿ ಮೂವರು ಕೈ ನಾಯಕರುಗಳು ದಿಢೀರ್ ದೆಹಲಿ ಪ್ರವಾಸ ಕೈಗೊಂಡಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಭೇಟಿಯಾಗಲಿದ್ದಾರೆ.

ನಗರದ ಶಾಸಕರುಗಳಾದ ಎಸ್ ಟಿ ಸೋಮಶೇಖರ್, ಭೈರತಿ ಬಸವರಾಜ್ ಹಾಗೂ ಮುನಿರತ್ನರವರು ಸಚಿವ ಸ್ಥಾನ ಹಾಗೂ ನಿಗಮ ಮಂಡಳಿ ನೇಮಕಕ್ಕೆ ಹೈಕಮಾಂಡ್ ಬಾಗಿಲು ತಟ್ಟಿದ್ದಾರೆ. ಶುಕ್ರವಾರ ಶಾಸಕರು ಏಕಾಏಕಿ ದೆಹಲಿ ಪ್ರವಾಸ ಕೈಗೊಂಡು, ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ನೇರವಾಗಿ ಭೇಟಿ ಮಾಡಿ ಮನವಿ ಸಲ್ಲಿಸುತ್ತಾರೆ ಎನ್ನಲಾಗಿದೆ. ಅಲ್ಲದೇ ರಾಹುಲ್ ಗಾಂಧಿ ಬಳಿ ತಮ್ಮ ಮನವಿವನ್ನು ಪರಿಗಣಿಸುವಂತೆ ಲಾಬಿ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆಯಾದಾಗಿನಿಂದಲೂ ಸಚಿವ ಸ್ಥಾನ ಆಕಾಂಕ್ಷಿಗಳ ಸಂಖ್ಯೆ ಹೆಚ್ಚುತ್ತಲೇ ಹೋಗುತ್ತಿದೆ. ಈ ಹಿನ್ನೆಲೆಯಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಮತ್ತೊಮ್ಮೆ ಸಚಿವ ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿಯಗಳ ನೇಮಕ ವಿಚಾರ ಕಾಂಗ್ರೆಸ್ ವಲಯದಲ್ಲಿ ಭಾರೀ ಪೈಪೋಟಿ ಏರ್ಪಟ್ಟಿದ್ದು, ನಾಯಕರುಗಳು ಸಚಿವ ಸ್ಥಾನ ಹಾಗೂ ನಿಗಮ ಮಂಡಳಿಗಳ ನಿಗಮಕ್ಕೆ ಖುದ್ದು ಹೈಕಮಾಂಡ್ ಬಾಗಿಲು ತಟ್ಟಿ, ಲಾಭಿ ನಡೆಸುತ್ತಿದ್ದಾರೆ ಎನ್ನಲಾಗಿದೆ.

Comments

Leave a Reply

Your email address will not be published. Required fields are marked *