ಹಂಗಾಮಿ ಸಿಎಂ ಹೆಚ್‍ಡಿಕೆಯಿಂದ ಸರ್ಕಾರದ ಹಿರಿಯ ಅಧಿಕಾರಿಗಳಿಗೆ ಚಹಾಕೂಟ

ಬೆಂಗಳೂರು: ಹಂಗಾಮಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳ ಚಹಾಕೂಟ ಏರ್ಪಡಿಸಿ ಕಳೆದ 14 ತಿಂಗಳ ಆಡಳಿತಾವಧಿಯಲ್ಲಿ ನೀಡಿದ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿದರು.

ತಮ್ಮ ಅಧಿಕಾರಾವಧಿಯಲ್ಲಿ ಎರಡು ಅಯವ್ಯಯಗಳ ಮೂಲಕ ರೂಪಿಸಿದ ಯೋಜನೆಗಳನ್ನು ಅನುಷ್ಠಾನ ಗೊಳಿಸಲು ಅಧಿಕಾರಿಗಳು ಬಹಳ ಶ್ರಮಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ರಾಜ್ಯದಲ್ಲಿ ರಾಜಕೀಯ ವಿದ್ಯಮಾನಗಳು ಏನೇ ಇದ್ದರೂ ನಿರ್ಲಿಪ್ತರಾಗಿ ಜನಹಿತಕ್ಕಾಗಿ ಕಾರ್ಯ ನಿರ್ವಹಿಸಿ ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಅಧಿಕಾರಿಗಳ ಪರವಾಗಿ ಮಾತನಾಡಿದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್ ಅವರು, ಕಳೆದ 14 ತಿಂಗಳ ಕಾರ್ಯ ನಿರ್ವಹಣೆಯ ಅವಧಿಯಲ್ಲಿ ಮುಖ್ಯಮಂತ್ರಿಯವರು ಅಧಿಕಾರಿಗಳನ್ನು ಸಹೋದರ ಭಾವದಿಂದ ವಿಶ್ವಾಸಕ್ಕೆ ತೆಗೆದುಕೊಂಡು ಕರ್ತವ್ಯ ನಿರ್ವಹಿಸಿದ್ದರು ಎಂದು ಸ್ಮರಿಸಿದರು. ಈ ಚಹಾಕೂಟದಲ್ಲಿ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್. ರಾಜು ಹಾಗೂ ಹಿರಿಯ ಐಎಎಸ್, ಐಪಿಎಸ್ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Comments

Leave a Reply

Your email address will not be published. Required fields are marked *