ಕಾಶ್ಮೀರದಲ್ಲಿ ಬ್ಯಾಂಕ್ ಮ್ಯಾನೇಜರ್ ಗುಂಡಿಕ್ಕಿ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ಇನ್ನೊಂದು ಹತ್ಯೆ ನಡೆದಿದೆ. ಗುರುವಾರ ಭಯೋತ್ಪಾದಕರು ಕುಲ್ಗಾಮ್‌ನಲ್ಲಿ ರಾಜಸ್ಥಾನ ಮೂಲದ ಬ್ಯಾಂಕ್ ಮ್ಯಾನೇಜರ್‌ನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆ, ಮೋಹನ್ ಪೋರಾದಲ್ಲಿರುವ ಎಲ್ಲಕಿ ದೇಹತಿ ಬ್ಯಾಂಕ್‌ನ ಮ್ಯಾನೇಜರ್ ವಿಜಯ್ ಕುಮಾರ್‌ನನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ರಾಜಸ್ಥಾನದ ಹನುಮಾನ್‌ಗಢ ಮೂಲದ ಕುಮಾರ್‌ನನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಲ್ಲಿ ಅವರು ಸಾವನ್ನಪ್ಪಿದ್ದಾರೆ.

ಉಗ್ರರ ದಾಳಿಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಹೆಚ್ಚಿನ ವಿವರಗಳನ್ನು ಸಂಗ್ರಹಿಸಲಾಗುತ್ತಿದೆ. ಶೀಘ್ರದಲ್ಲಿ ಆರೋಪಿಗಳ ಪತ್ತೆ ಮಾಡಲಾಗುವುದು ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಘಟನೆಯ ಬಳಿಕ ಸೇನಾ, ಅರೆಸೇನಾ ಪಡೆಗಳು ಪ್ರದೇಶವನ್ನು ಸುತ್ತುವರಿದು, ಶೋಧ ಕಾರ್ಯ ಆರಂಭಿಸಿದ್ದಾರೆ. ಇದನ್ನೂ ಓದಿ: ಯೋಧರು ಪ್ರಯಾಣಿಸುತ್ತಿದ್ದ ವಾಹನ ಸ್ಫೋಟ: 3 ಸೈನಿಕರ ಸ್ಥಿತಿ ಗಂಭೀರ

ಕುಲ್ಗಾಮ್‌ನಲ್ಲಿ ಕೆಲಸ ಮಾಡುತ್ತಿದ್ದ ರಾಜಸ್ಥಾನದ ಹನುಮಾನ್‌ಗಢ ನಿವಾಸಿ ಬ್ಯಾಂಕ್ ಮ್ಯಾನೇಜರ್ ವಿಜಯ್ ಕುಮಾರ್ ಅವರ ಹತ್ಯೆ ಅತ್ಯಂತ ಖಂಡನೀಯ. ಕಾಶ್ಮೀರದಲ್ಲಿ ಶಾಂತಿ ನೆಲೆಸುವಲ್ಲಿ ಎನ್‌ಡಿಎ ಸರ್ಕಾರ ವಿಫಲವಾಗಿದೆ. ಕೇಂದ್ರ ಸರ್ಕಾರವು ಕಾಶ್ಮೀರದಲ್ಲಿ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ.

ಇಂದು ಬೆಳಗ್ಗೆ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಸೈನಿಕರು ಪ್ರಯಾಣಿಸುತ್ತಿದ್ದ ಖಾಸಗಿ ವಾಹನ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಮೂವರು ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶೋಪಿಯಾನ್ ಘಟನೆ ನಡೆದ ಪ್ರದೇಶದಿಂದ ಕೇವಲ 12 ಕಿಮೀ ಅಂತರದಲ್ಲೇ ಬ್ಯಾಂಕ್ ಮ್ಯಾನೇಜರ್‌ನ ಹತ್ಯೆ ನಡೆದಿದೆ. ಇದನ್ನೂ ಓದಿ: 100 ಅಡಿ ಆಳದ ಹಳ್ಳಕ್ಕೆ ಬಿದ್ದ ಸ್ಕೂಲ್ ಬಸ್ – ಚಾಲಕನಿಗೆ ಗಂಭೀರ ಗಾಯ

ಕಾಶ್ಮೀರದ ಹೊರಗಿನ ಮತ್ತು ಅಲ್ಲಿಯ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಉದ್ಯೋಗಿಗಳ ರಕ್ಷಣೆಗಾಗಿ ಕಣಿವೆಯಲ್ಲಿ ಹೆಚ್ಚಿನ ಭದ್ರತೆಯ ನಡುವೆಯೂ ಈ ಘಟನೆಗಳು ಆತಂಕಕಾರಿಯಾಗಿವೆ. 2 ದಿನಗಳ ಹಿಂದೆ ಕುಲ್ಗಾಮ್ ಜಿಲ್ಲೆಯ ಗೋಪಾಲ್ಪೊರಾ ಪ್ರದೇಶದಲ್ಲಿ ಶಾಲಾ ಶಿಕ್ಷಕಿ ರಜನಿ ಬಾಲಾಳನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದರು. ಕಳೆದ ವಾರ ಬುದ್ಗಾಮ್‌ನ ಚದೂರ ಪ್ರದೇಶದಲ್ಲಿ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರು ನಟಿ ಅಮ್ರೀನ್ ಭಟ್‌ನನ್ನು ಗುಂಡಿಕ್ಕಿ ಕೊಂದಿದ್ದರು. ಮೇ 12ರಂದು ಬುದ್ಗಾಮ್ ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರ ರಾಹುಲ್ ಭಟ್ ಅವರನ್ನು ಉಗ್ರರು ಹತ್ಯೆ ಮಾಡಿದ್ದರು.

ಸರಣಿ ಹತ್ಯೆಗಳ ಬೆನ್ನಲೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಕಾಶ್ಮೀರೇತರ ಸರ್ಕಾರಿ ಸಿಬ್ಬಂದಿ ಜೂನ್ 6 ರೊಳಗೆ ಜಿಲ್ಲಾ ಪ್ರದೇಶಗಳಿಗೆ ವಾಪಸ್ ಆಗುವಂತೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಗೃಹ ಸಚಿವ ಅಮಿತ್ ಶಾ ಶೀಘ್ರದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ.

Comments

Leave a Reply

Your email address will not be published. Required fields are marked *