ರಾಹುಲ್ ಗಾಂಧಿ ಚೀನಾ, ಪಾಕಿಸ್ತಾನಗಳ ಮಧ್ಯವರ್ತಿ: ಶಾಸಕ ಯತ್ನಾಳ್ ವ್ಯಂಗ್ಯ

ವಿಜಯಪುರ: ಕರೆಯದಿದ್ದರೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿದೇಶಗಳಿಗೆ ಭೇಟಿ ನೀಡುತ್ತಿದ್ದು, ಚೀನಾ ಹಾಗೂ ಪಾಕಿಸ್ತಾನ ಮಧ್ಯವರ್ತಿಯಾಗಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವ್ಯಂಗ್ಯವಾಡಿದ್ದಾರೆ.

ಜಿಲ್ಲೆಯ ಸಿಂಧಗಿಯಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ತಾವು ಜನಿವಾರ ಬ್ರಾಹ್ಮಣರು ಅಂತಾ ರಾಹುಲ್ ಗಾಂಧಿ ಹೇಳಿಕೊಳ್ಳುತ್ತಾರೆ. ಆದರೆ ಈಗ ಅವರಿಗೆ ದೇವರ ನೆನಪಾಗಿದೆ. ರಾಹುಲ್ ಗಾಂಧಿ ಒಬ್ಬ ಅಯೋಗ್ಯ ವ್ಯಕ್ತಿಯಾಗಿದ್ದು, ಪ್ರಧಾನಿ ಆಗಬಾರದು ಎಂದು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದರು.

ಭಾರತದ ಸೈನಿಕರನ್ನು ಪಾಕಿಸ್ತಾನಿಯರು ಹತ್ಯೆ ಮಾಡುತ್ತಿದ್ದಾರೆ. ಇದನ್ನು ಮರೆತು ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಹೋಗಿ ಬಂದರು. ಅಷ್ಟೇ ಅಲ್ಲದೆ ಕಾಂಗ್ರೆಸ್ಸಿನವರು ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಕೊಡಲು ಮುಂದಾಗುತ್ತಿದ್ದಾರೆ ಎಂದು ಆರೋಪಿಸಿದರು.

ಬಾಂಗ್ಲಾದೇಶ ಸೇರಿದಂತೆ ವಿವಿಧ ದೇಶಗಳಿಂದ ಜನರು ಬರುತ್ತಿದ್ದಾರೆ. ಮುಂದೊಂದು ದಿನ ನಾವು ಅವರ ಗುಲಾಮರಾಗಿ ಬಾಳಬೇಕಾಗುತ್ತದೆ. ಹೀಗಾಗಿ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಮಾಡಬೇಡಿ ಎಂದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *